Asianet Suvarna News Asianet Suvarna News

ಟ್ರೆಂಟ್‌ಬ್ರಿಡ್ಜ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ!

ಇಂಗ್ಲೆಂಡ್ ಪ್ರವಾಸದಲ್ಲಿ ಸೋಲಿನ ಮುಖಭಂಗ ಅನುಭವಿಸಿರುವ ಟೀಂ ಇಂಡಿಯಾ ಇದೀಗ ತಿರುಗೇಟು ನೀಡಲು ತಯಾರಾಗುತ್ತಿದೆ. 3ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಉಳಿಸಿಕೊಳ್ಳಲು ಕೊಹ್ಲಿ ಸೈನ್ಯ ಕಠಿಣ ಅಭ್ಯಾಸ ನಡೆಸುತ್ತಿದೆ.

India vs england test virat kohli boys practice for 3rd test
Author
Bengaluru, First Published Aug 17, 2018, 8:04 PM IST

ನಾಟಿಂಗ್‌ಹ್ಯಾಮ್(ಆ.17): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸಿದೆ ಸರಣಿ ಸೋಲಿನ ಭೀತಿಯಲ್ಲಿರುವ ಕೊಹ್ಲಿ ಸೈನ್ಯ, ಅಂತಿಮ ಕಸರತ್ತು ನಡೆಸುತ್ತಿದೆ. ಈ ಮೂಲಕ ಸರಣಿಯಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. 

3ನೇ ಪಂದ್ಯ ಭಾರತದ ಪಾಲಿಗೆ ಮಾಡು ಇಲ್ಲವೇ ಮಡಿ. ಈ ಪಂದ್ಯದ ಫಲಿತಾಂಶ ಸರಣಿ ನಿರ್ಧರಿಸಲಿದೆ.  ಮಹತ್ವದ ಪಂದ್ಯಕ್ಕಾಗಿ  ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಹೆಚ್ಚು ಹೊತ್ತು ಬ್ಯಾಟಿಂಗ್ ಅಭ್ಯಾಸ ಮಾಡಿದರು. ಇಂಗ್ಲೆಂಡ್ ಬೌಲರ್‌ಗಳನ್ನ ಎದುರಿಸಲು ಅಭ್ಯಾಸ ನಡೆಸಿದರು.  

 

 

ಕೋಚ್ ರವಿ ಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್  ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ವೇಗಿಗಳು ಅಭ್ಯಾಸ ನಡೆಸಿದರು. ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಪ್ರಾಕ್ಟೀಸ್ ಮಾಡಿದರು. ವೇಗಿ ಜಸ್‌ಪ್ರೀತ್ ಬುಮ್ರಾ ಕೂಡ ಅಭ್ಯಾಸ ನಡೆಸಿದ್ದಾರೆ.

 

 

ಇಂಗ್ಲೆಂಡ್ ವಿರುದ್ದದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 0-2 ಹಿನ್ನಡೆ ಅನುಭವಿಸಿದೆ. ನಾಳೆಯಿಂದ(ಆ.18) ಆರಂಭಗೊಳ್ಳಲಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಆಂಗ್ಲರಿಗೆ ತಿರುಗೇಟು ನೀಡಲು ಸಜ್ಜಾಗಿದೆ. 

Follow Us:
Download App:
  • android
  • ios