ನಾಟಿಂಗ್‌ಹ್ಯಾಮ್(ಆ.20): ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ 23ನೇ ಶತಕ ಸಿಡಿಸಿದರು.

ತೃತೀಯ ದಿನದಾಟದಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್‌ಗಳೊಂದಿಗೆ 2ನೇ ಇನ್ನಿಂಗ್ಸ್ ಮುಂದುವರಿಸಿದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಆಸರೆಯಾದರು. ಶತಕದತ್ತ ಮುನ್ನುಗ್ಗುತ್ತಿದ್ದ ಚೇತೇಶ್ವರ್ ಪೂಜಾರ ಪೂಜಾರ 72 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 3ನೇ ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ವಿರಾಟ್ ಕೊಹ್ಲಿ ದಿಟ್ಟ ಹೋರಾಟ ನೀಡಿದರು. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ 2ನೇ ಶತಕ ಪೂರೈಸಿದರು. 

ಶತಕ ಸಿಡಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಔಟಾದರು. ಕೊಹ್ಲಿ 103 ರನ್ ಸಿಡಿಸಿ ನಿರ್ಗಮಿಸಿದರು.  ಸದ್ಯ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 281 ರನ್ ಪೇರಿಸಿದೆ. ಈ ಮೂಲಕ ಭಾರತ  449 ರನ್ ಮುನ್ನಡೆ ಪಡೆದುಕೊಂಡಿದೆ.