ನಾಟಿಂಗ್‌ಹ್ಯಾಮ್(ಆ.18): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿ ಔಟಾಗಿದ್ದಾರೆ.  ಈ ಮೂಲಕ ಕೇವಲ 3 ರನ್‌ಗಳಿಂದ ಶತಕ ವಂಚಿತರಾದರು.  152 ಎಸೆತ ಎದುರಿಸಿದ ವಿರಾಟ್ ಕೊಹ್ಲಿ 11 ಬೌಂಡರಿ ನೆರವಿನಿಂದ 9 7 ರನ್ ಸಿಡಿಸಿ ಔಟಾದರು. ಇದರೊಂದಿಗೆ ಭಾರತ 5ನೇ ವಿಕೆಟ್ ಕಳೆದುಕೊಂಡಿತು. 

 

 

3 ಬದಲಾವಣೆಯೊಂದಿಗೆ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿಗೆ ಆರಂಭದಲ್ಲೇ ಯಶಸ್ಸು ಸಿಕ್ಕಿತು. ಭಾರತದ ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಕಾಣಿಕೆ ನೀಡಿದರು. ಆದರೆ ಚೇತೇಶ್ವರ್ ಪೂಜಾರ ಕೇವಲ 14 ರನ್ ಸಿಡಿಸಿ ಔಟಾದರು.

ತಂಡದ ಜವಾಬ್ದಾರಿ ಹೊತ್ತ ನಾಯಕ ವಿರಾಟ್ ಕೊಹ್ಲಿಗೆ, ಉಪನಾಯಕ ಅಜಿಂಕ್ಯ ರಹಾನೆ ಸಾಥ್ ನೀಡಿದರು. ಉತ್ತಮ ಪ್ರದರ್ಶನ ನೀಡಿದ ರಹಾನೆ 81 ರನ್ ಸಿಡಿಸಿ ಔಟಾದರು.  ಆದರೆ ಕೊಹ್ಲಿ ದಿಟ್ಟ ಹೋರಾಟ ನೀಡಿ 97 ರನ್ ಸಿಡಿಸಿ ಔಟಾದರು.