ನಾಟಿಂಗ್‌ಹ್ಯಾಮ್(ಆ.20): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಇದೀಗ 400 ಮುನ್ನಡೆ ಪಡೆದುಕೊಂಡಿದೆ. 

ತೃತೀಯ ದಿನದಾಟದಲ್ಲಿ 2 ವಿಕೆಟ್ ನಷ್ಟಕ್ಕೆ 124 ರನ್‌ಗಳೊಂದಿಗೆ 2ನೇ ಇನ್ನಿಂಗ್ಸ್ ಮುಂದುವರಿಸಿದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಆಸರೆಯಾದರು. ಕೊಹ್ಲಿ ಹಾಗೂ ಪೂಜಾರ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ಶತಕದತ್ತ ಮುನ್ನುಗ್ಗುತ್ತಿದ್ದ ಚೇತೇಶ್ವರ್ ಪೂಜಾರ ಪೂಜಾರ 72 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 3ನೇ ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಆಸರೆಯಾಗಿದ್ದಾರೆ.    ಸದ್ಯ ಭಾರತ 2ನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ನಷ್ಟಕ್ಕೆ235 ರನ್ ಸಿಡಿಸಿದೆ. ಈ ಮೂಲಕ 403 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್‌ಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಕೇವಲ 161ರನ್‌ಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ 168 ರನ್ ಮುನ್ನಡೆ ಪಡೆದುಕೊಂಡಿತ್ತು.