ಲಂಡನ್(ಆ.15): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ಬದಲಾವಣೆ ಮಾಡಲು ಮುಂದಾಗಿದೆ. ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಸಮಸ್ಯೆ ಪರಿಹರಿಸಲು ಇದೀಗ ಕನ್ನಡಿಗ ಕರುಣ್ ನಾಯರ್‌ಗೆ ಸ್ಥಾನ ನೀಡೋ ಸಾಧ್ಯತೆ ಇದೆ.

2016ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್, ಇಂಗ್ಲೆಂಡ್ ವಿರುದ್ಧವೇ ತ್ರಿಶತಕ ಸಿಡಿಸಿ ಮಿಂಚಿದ್ದರು. ಬಳಿಕ ಕೆಲ ಅವಕಾಶಗಳನ್ನ ಪಡೆದ ಕರುಣ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ನೀಡಲು ಟೀಂ ಇಂಡಿಯಾ ಮುಂದಾಗಿದೆ.

ಚೆನ್ನೈ ಟೆಸ್ಟ್ ಪಂದ್ಯದಲ್ಲಿ 303 ರನ್ ಸಿಡಿಸಿ ಮಿಂಚಿದ್ದರು. ಈ ಮೂಲಕ ವಿರೇಂದ್ರ ಸೆಹ್ವಾಗ್ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸಿದ ಭಾರತೀಯ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಇದೀಗ ಕರುಣ್ ನಾಯರ್‌ಗೆ ಸ್ಥಾನ ನೀಡೋ ಮೂಲಕ ಭಾರತದ ಮಧ್ಯಮ ಕ್ರಮಾಂಕವನ್ನ ಬಲಪಡಿಸೋ ಸಾಧ್ಯತೆ ಇದೆ.