ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.. ಗೆಲುವಿಗೆ 245 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ 2ನೇ ಇನ್ನಿಂಗ್ಸ್‌ನಲ್ಲಿ ದಿಟ್ಟ ಹೋರಾಟ ನೀಡುತ್ತಿದೆ. ಇಲ್ಲಿದೆ 4ನೇ ದಿನದ ಅಪ್‌ಡೇಟ್ಸ್.

ಸೌತಾಂಪ್ಟನ್(ಸೆ.02): ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 245 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಟೀಂ ಇಂಡಿಯಾಗೆ ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಅರ್ಧಶತಕ ಸಿಡಿಸಿ ಟೀಂ ಇಂಡಿಯಾಗೆ ಆಸರೆಯಾಗಿದ್ದ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪತನಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2ನೇ ಇನ್ನಿಂಗ್ಸ್ ಆರಂಭದಲ್ಲೇ ಟೀಂ ಇಂಡಿಯಾ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ರಾಹುಲ್ ಶೂನ್ಯ ಸುತ್ತಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಚೇತೇಶ್ವರ್ ಪೂಜಾರ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಸಿಡಿಸಿ ಔಟಾದರು.

3 ಬೌಂಡರ್ ಸಿಡಿಸಿ ಉತ್ತಮ ಪ್ರದರ್ಶನ ನೀಡೋ ಸೂಚನೆ ನೀಡಿದ ಶಿಖರ್ ಧವನ್ 17 ರನ್ ಸಿಡಿಸಿ ಔಟಾದರು. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ತಂಡಕ್ಕೆ ಚೇತರಿಕೆ ನೀಡಿದರು.

ಅದ್ಬುತ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಆಸರೆದರು. ಕೊಹ್ಲಿಗೆ ಅಜಿಂಕ್ಯ ರಹಾನೆ ಕೂಡ ಉತ್ತಮ ಸಾಥ್ ನೀಡದು. ಆದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಕೊಹ್ಲಿ ವಿಕೆಟ್ ಪತನಗೊಂಡಿದೆ. ಕೊಹ್ಲಿ 58 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಭಾರತ 4 ವಿಕೆಟ್ ನಷ್ಟಕ್ಕೆ 123 ರನ್ ಸಿಡಿಸಿದೆ. ಗೆಲುವಿಗೆ ಇನ್ನು 122 ರನ್‌ಗಳ ಅವಶ್ಯಕತೆ ಇದೆ.