ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಗೆದ್ದಿರುವ ಭಾರತಕ್ಕೆ ದ್ವಿತೀಯ ಪಂದ್ಯದ ಆರಂಭದಲ್ಲೇ ಆಘಾತ. 22 ರನ್ ಗಳಿಸುವಷ್ಟರಲ್ಲೇ ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿದೆ. ಔಟಾದ ಕ್ರಿಕೆಟಿಗ ಯಾರು? ಇಲ್ಲಿದೆ ವಿವರ
ಡಬ್ಲಿನ್(ಜೂ.29): ಐರ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತವಾಗಿದೆ. ನಾಯಕ ವಿರಾಟ್ ಕೊಹ್ಲಿ 9 ರನ್ ಸಿಡಿಸಿ ಔಟಾಗಿದ್ದಾರೆ.
ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತ, ಆರಂಭದಲೇ ವಿಕೆಟ್ ಕಳೆದುಕೊಂಡಿದೆ. ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅತ್ಯುತ್ತಮ ಜೊತೆಯಾಟದ ನಿರೀಕ್ಷೆಯಲ್ಲಿದ್ದರು. ಆದರೆ ಕೊಹ್ಲಿ 9 ರನ್ ಗಳಿಸಿ ಔಟಾದರು. ಈ ಮೂಲಕ ಇವರ ಜೊತೆಯಾಟ 22 ರನ್‌ಗಳಿಗೆ ಅಂತ್ಯವಾಯಿತು.
ಶಿಖರ್ ಧವನ್, ಎಂ ಎಸ್ ಧೋನಿ, ಭುವನೇಶ್ವರ್ ಕುಮಾರ್ ಹಾಗೂ ಜಸ್‌ಪ್ರೀತ್ ಬುಮ್ರಾ ಬದಲು ಕೆಎಲ್ ರಾಹುಲ್, ಉಮೇಶ್ ಯಾದವ್, ದಿನೇಶ್ ಕಾರ್ತಿಕ್ ಹಾಗೂ ಸಿದ್ಧಾರ್ಥ್ ಕೌಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸಿದ್ಧಾರ್ಥ್ ಕೌಲ್‌ಗೆ ಇದು ಪಾದಾರ್ಪಣ ಪಂದ್ಯ.
