ಭಾರತ-ಐರ್ಲೆಂಡ್ ಟಿ20: ದ್ವಿತೀಯ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ರಿಲ್ಯಾಕ್ಸ್

First Published 29, Jun 2018, 2:21 PM IST
India vs Ireland Virat Kohli And His Boys Spent A 'Beautiful Day' In Dublin
Highlights

ಎರಡು ಟಿ20 ಪಂದ್ಯದ ಸರಣಿಗಾಗಿ ಐರ್ಲೆಂಡ್ ನಾಡಿನಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಗೆಲುವಿನ ವಿಶ್ವಾಸದಲ್ಲಿದೆ. ಮೊದಲ ಗೆಲುವಿನ ಬಳಿಕ ಭಾರತೀಯ ಕ್ರಿಕೆಟಿಗರು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರ ಮಸ್ತಿ ಹೇಗಿತ್ತು? ಇಲ್ಲಿದೆ ವಿವರ.

ಡಬ್ಲಿನ್(ಜೂ.29): ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಐರ್ಲೆಂಡ್ ರಾಜಧಾನಿ ಡಬ್ಲಿನ್‌ನಲ್ಲಿ ನಡೆಯಲಿರುವ  ಅಂತಿಮ ಪಂದ್ಯಕ್ಕೂ ಮುನ್ನ ಕೊಹ್ಲಿ ಸೈನ್ಯ ಫುಲ್ ರಿಲ್ಯಾಕ್ಸ್ ಆಗಿದೆ.

ಡಬ್ಲಿನ್‌ನಲ್ಲಿರೋ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿರುವ ಟೀಂ ಇಂಡಿಯಾ ಕ್ರಿಕೆಟಿಗರು ಎಂಜಾಯ್ ಮಾಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರ ಔಟಿಂಗ್ ಫೋಟೋವನ್ನ ನಾಯಕ ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

 

;

 

ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಕೂಡ  ಔಟಿಂಗ್ ಫೋಟೋಗಳನ್ನ ಪೋಸ್ಟ್ ಮಾಡಿದ್ದಾರೆ. ಈ ಮೂಲಕ 2ನೇ ಪಂದ್ಯಕ್ಕೂ ಮುನ್ನ ಕೊಹ್ಲಿ ಬಾಯ್ಸ್ ಫುಲ್ ರಿಲ್ಯಾಕ್ಸ್ ಆಗಿದ್ದಾರೆ.

 

 

ಐರ್ಲೆಂಡ್ ವಿರುದ್ಧದ ಮೊದಲ ಟಿ-ಟ್ವೆಂಟಿ ಪಂದ್ಯದಲ್ಲಿ ಭಾರತ 76 ರನ್‌ಗಳ ಗೆಲುವು ದಾಖಲಿಸಿದೆ. ಇಂದು(ಜೂ.29) ಐರ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯ ಆಡಲಿರುವ ಭಾರತ, ಕ್ಲೀನ್ ಸ್ವೀಪ್ ಗೆಲುವಿನ ವಿಶ್ವಾಸದಲ್ಲಿದೆ.

loader