ಅಂತಾರಾಷ್ಟ್ರೀಯ ಟಿ20 - ಸಿಕ್ಸರ್‌ನಲ್ಲಿ ಶತಕ ಸಿಡಿಸಿದ ರೋಹಿತ್ ಶರ್ಮಾ -

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 8, Feb 2019, 1:59 PM IST
India vs New zealand cricket Rohit Sharma hit 100 sixes in t20 international
Highlights

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಕ್ಸರ್‌ ಮೂಲಕ ಸಾಧನೆ ಮಾಡಿದ್ದಾರೆ. ಸದ್ಯ ರೋಹಿತ್ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ್ದಾರೆ.

ಆಕ್ಲೆಂಡ್(ಫೆ.08): ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಕ್ಸರ್‌ನಲ್ಲಿ ಶತಕ ಸಿಡಿಸಿದ್ದಾರೆ. ಆಕ್ಲೆಂಡ್ ಪಂದ್ಯದಲ್ಲಿ ರೋಹಿತ್ ಶರ್ಮಾ 2ನೇ ಸಿಕ್ಸರ್ ಸಿಡಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಸಾಧನೆ ಮಾಡಿದ್ದಾರೆ. ಈ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದ ಸಾಧಕರಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಮಾಜಿ ನಾಯಕ ಸೌರವ್ ಗಂಗೂಲಿ ಮನೆಗೆ ಹೊಸ ಅತಿಥಿ ಆಗಮನ!!

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್
ಕ್ರಿಸ್ ಗೇಲ್     103
ಮಾರ್ಟಿನ್ ಗಪ್ಟಿಲ್ 103
ರೋಹಿತ್ ಶರ್ಮಾ 101
ಬ್ರೆಂಡನ್ ಮೆಕ್ಕಲಂ 91
ಕಾಲಿನ್ ಮುನ್ರೊ 87
ಶೇನ್ ವ್ಯಾಟ್ಸ್‌ನ್ 83

ಇದನ್ನೂ ಓದಿ: ಭಾರತ ಎ ತಂಡಕ್ಕೆ ಕೆ.ಎಲ್.ರಾಹುಲ್‌ ನಾಯಕ- ರಹಾನೆಗೆ ರೆಸ್ಟ್ ಆಫ್ ಇಂಡಿಯಾ ಪಟ್ಟ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ರೋಹಿತ್ ಶರ್ಮಾ ಮೊದಲ ಸ್ಥಾನಕ್ಕೇರಿದ್ದಾರೆ. ಸದ್ಯ ರೋಹಿತ್ ಶರ್ಮಾ 349 ಸಿಕ್ಸರ್ ಸಿಡಿಸೋ ಮೂಲಕ, ಮಾಜಿ ನಾಯಕ ಎಂ.ಎಸ್.ಧೋನಿ ಹಿಂದಿಕ್ಕಿದ್ದಾರೆ. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 348 ರನ್ ಸಿಕ್ಸರ್ ಸಿಡಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಭಾರತೀಯರು

ರೋಹಿತ್ ಶರ್ಮಾ  349
ಎಂ.ಎಸ್.ಧೋನಿ 348
ಸಚಿನ್ ತೆಂಡೂಲ್ಕರ್ 264

ನ್ಯೂಜಿಲೆಂಡ್ ವಿರುದ್ದದ ಅಂತಿಮ 2 ಏಕದಿನ ಹಾಗೂ 3 ಟಿ20 ಪಂದ್ಯದಿಂದ  ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಕಿವೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು.
 

loader