ನ್ಯೂಜಿಲೆಂಡ್ ವಿರುದ್ದದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ. ಗೆಲುವಿಗಾಗಿ ಭಾರತ ಮಾಡಿರುವ ಬದಲಾವಣೆ ಏನು? ಇಲ್ಲಿದೆ ವಿವರ.
ವೆಲ್ಟಿಂಗ್ಟನ್(ಫೆ.03): ನ್ಯೂಜಿಲೆಂಡ್ ವಿರುದ್ದಧ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 4ನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ಅಂತಿಮ ಪಂದ್ಯದಲ್ಲಿ ತಿರುಗೇಟು ನೀಡೋ ವಿಶ್ವಾಸದಲ್ಲಿದೆ. ಇನ್ನು ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಐಪಿಎಲ್ ಪ್ರದರ್ಶನವನ್ನ ಟೆಸ್ಟ್, ಏಕದಿನ ಆಯ್ಕೆಗೆ ಪರಿಗಣಿಸಲ್ಲ- ಬಿಸಿಸಿಐ!
ಇಂಜುರಿಯಿಂದ ಕಳೆದೆರಡು ಪಂದ್ಯದಿಂದ ಹೊರಗುಳಿದಿದ್ದ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ತಂಡಕ್ಕೆ ವಾಪಾಸ್ ಆಗಿದ್ದಾರೆ. ಧೋನಿಗಾಗಿ ದಿನೇಶ್ ಕಾರ್ತಿಕ್ ತಮ್ಮ ಸ್ಥಾನ ಬಿಟ್ಟಿಕೊಟ್ಟಿದ್ದಾರೆ. ಖಲೀಲ್ ಅಹಮ್ಮದ್ ಬದಲು ವೇಗಿ ಮೊಹಮ್ಮದ್ ಶಮಿ ವಾಪಾಸ್ ಆಗಿದ್ದರೆ, ಕುಲ್ದೀಪ್ ಯಾದವ್ ಬದಲು ವಿಜಯ್ ಶಂಕರ್ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ದದ ಆರಂಭಿಕ 3 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ನಾಲ್ಕನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು. ಇದೀಗ 5ನೇ ಪಂದ್ಯದಲ್ಲಿ ಗೆಲುವು ಸಾಧಿಸಿ ನ್ಯೂಜಿಲೆಂಡ್ ಪ್ರವಾಸಕ್ಕೆ ಗುಡ್ ಬೈ ಹೇಳಲು ಟೀಂ ಇಂಡಿಯಾ ನಿರ್ಧರಿಸಿದೆ.
