ವೆಲ್ಲಿಂಗ್ಟನ್(ಫೆ.02): ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಇಂಜುರಿಗೆ ತುತ್ತಾಗಿರುವ ಎಂ.ಎಸ್.ಧೋನಿ ಕಳೆದೆರಡು ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಎಂ.ಎಸ್.ಧೋನಿ ಫಿಟ್ನೆಸ್ ವರದಿ ಬಹಿರಂಗವಾಗಿದೆ. ನ್ಯೂಜಿಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: ವಿಶ್ವಕಪ್’ಗೆ ಬಹುತೇಕ ಒಂದು ಡಜನ್ ಟೀಂ ಇಂಡಿಯಾ ಆಟಗಾರರು ಫಿಕ್ಸ್..!

ಇಂಜುರಿಯಿಂದ ಚೇತರಿಸಿಕೊಂಡಿರುವ ಧೋನಿ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಕಿವೀಸ್ ವಿರುದ್ದದ 5ನೇ ಏಕದಿನ ಪಂದ್ಯದಲ್ಲಿ ಧೋನಿ ಆಡೋ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಟೀಂ ಇಂಡಿಯಾ ಅಸಿಸ್ಟೆಂಟ್ ಕೋಚ್ ಸಂಜಯ್ ಬಂಗಾರ್ ಹೇಳಿದ್ದಾರೆ. 

ಇದನ್ನೂ ಓದಿ: ಏರ್ ಶೋ ಎಫೆಕ್ಟ್: ಆಸಿಸ್ ವಿರುದ್ಧದ ಮೊದಲ T20 ಪಂದ್ಯ ಬೆಂಗಳೂರಿನಿಂದ ಶಿಫ್ಟ್

ಆಸ್ಟ್ರೇಲಿಯಾ ವಿರುದ್ದದ 3 ಏಕದಿನ ಪಂದ್ಯದಲ್ಲಿ ಸತತ 3 ಅರ್ಧಶತಕ ಸಿಡಿಸಿ ಭರ್ಜರಿ ಫಾರ್ಮ್ ಕಂಡುಕೊಂಡಿದ್ದ ಧೋನಿ, ನ್ಯೂಜಿಲೆಂಡ್ ವಿರುದ್ಧವೂ ಅದೇ ಪ್ರದರ್ಶನ ಮುಂದುವರಿಸಿದ್ದರು. ಆದರೆ 2ನೇ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಧೋನಿ 3 ಮತ್ತು 4ನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು.