ಹ್ಯಾಮಿಲ್ಟನ್(ಜ.31): ನ್ಯೂಜಿಲೆಂಡ್ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಟೀಂ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿದೆ. ಶಿಖರ್ ಧವನ್ 13 ರನ್ ಸಿಡಿಸಿ ಟ್ರೆಂಟ್ ಬೋಲ್ಟ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾಗೆ ಇದು 200ನೇ ಏಕದಿನ ಪಂದ್ಯ ಅನ್ನೋದು ವಿಶೇಷ.

ಇದನ್ನೂ ಓದಿ: ಕ್ರಿಕೆಟಿಗರ ಆರ್ಥಿಕ ಸಹಾಯ- ಮಾಜಿ ಕ್ರಿಕೆಟಿಗ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್!

4ನೇ ಪಂದ್ಯಕ್ಕಾಗಿ ರೋಹಿತ್ ಶರ್ಮಾ 2 ಬದಲಾವಣೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಬದಲು ಅಂಡರ್ 19 ತಂಡದಲ್ಲಿ ಮಿಂಚಿದ ಶುಭ್‌ಮಾನ್ ಗಿಲ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಗಿಲ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಮೊಹಮ್ಮದ್ ಶಮಿ ಬದಲು ಖಲೀಲ್ ಅಹಮ್ಮದ್‌ಗೆ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಸ್ಪೇನ್ ವಿರುದ್ದ ಭಾರತ ಮಹಿಳಾ ತಂಡಕ್ಕೆ 5-2 ಅಂತರದ ಗೆಲುವು!

ಇಂಜುರಿಯಿಂದ ತೃತೀಯ ಪಂದ್ಯ ಮಿಸ್ ಮಾಡಿಕೊಂಡಿದ್ದ ಎಂ.ಎಸ್.ಧೋನಿ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ 4ನೇ ಏಕದಿನ ಪಂದ್ಯದಿಂದಲೂ ಹೊರಗುಳಿದಿದ್ದಾರೆ.