ನ್ಯೂಜಿಲೆಂಡ್ ವಿರುದ್ದದ 5ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಸಂಭನೀಯ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ತಂಡದಲ್ಲಿ ಕೆಲ ಬದಲಾವಣೆ ಮಾಡಲು ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. ಇಲ್ಲಿದೆ ಸಂಭವನೀಯ ತಂಡ.

ವೆಲ್ಲಿಂಗ್ಟನ್(ಫೆ.02): ನ್ಯೂಜಿಲೆಂಡ್ ವಿರುದ್ದದ 4ನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾ ಇದೀಗ 5ನೇ ಪಂದ್ಯದಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಇತ್ತ ಆತಿಥೇಯ ನ್ಯೂಜಿಲೆಂಡ್ ಸೋಲಿನ ಅಂತರ ಕಡಿಮೆ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ಐಪಿಎಲ್‌ ಪ್ರದರ್ಶನವನ್ನ ಟೆಸ್ಟ್, ಏಕದಿನ ಆಯ್ಕೆಗೆ ಪರಿಗಣಿಸಲ್ಲ- ಬಿಸಿಸಿಐ!

5ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಕೆಲ ಬದಲಾವಣೆ ಮಾಡಲಿದೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಎಂ.ಎಸ್.ಧೋನಿ ಅಂತಿಮ ಪಂದ್ಯ ಆಡಲಿದ್ದಾರೆ ಎಂದು ಅಸಿಸ್ಟೆಂಟ್ ಕೋಚ್ ಸಂಜಯ್ ಬಂಗಾರ್ ಹೇಳಿದ್ದಾರೆ. ಹೀಗಾಗಿ ತಂಡದಲ್ಲಿ ಬದಲಾವಣೆ ಖಚಿತ. ಭಾರತದ ಸಂಭವನೀಯ ತಂಡ ಇಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ತಂಡದ ಆಟಗಾರರ ಒಟ್ಟು ವೇತನ-ಯಾವ ತಂಡಕ್ಕೆ ಮೊದಲ ಸ್ಥಾನ?

ಭಾರತ ಸಂಭನೀಯ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಶುಭ್‌ಮಾನ್ ಗಿಲ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ