ಆಕ್ಲೆಂಡ್(ಫೆ.08): ನ್ಯೂಜಿಲೆಂಡ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಸಂಕಷ್ಟಕ್ಕೆ ಸಿಲುಕಿದೆ.  ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ನ್ಯೂಜಿಲೆಂಡ್ ತಂಡಕ್ಕೆ ಕ್ರುನಾಲ್ ಪಾಂಡ್ಯ ಶಾಕ್ ನೀಡಿದ್ದಾರೆ. ಹೀಗಾಗಿ ಕಿವೀಸ್ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದೆ.

ಇದನ್ನೂ ಓದಿ: ಮಾಜಿ ನಾಯಕ ಸೌರವ್ ಗಂಗೂಲಿ ಮನೆಗೆ ಹೊಸ ಅತಿಥಿ ಆಗಮನ!!

ಮೊದಲ ಪಂದ್ಯದಲ್ಲಿ ಅಬ್ಬರಿಸಿದ ಟಿಮ್ ಸೈಫರ್ಟ್ 2ನೇ ಪಂದ್ಯದಲ್ಲಿ ನಿರಾಸೆ ಮೂಡಿಸಿದರು. ಭುವನೇಶ್ವರ್ ಕುಮಾರ್ ಎಸೆತದಲ್ಲಿ ವಿಕೆಟ್ ಕೀಪರ್ ಎಂ.ಎಸ್.ಧೋನಿಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಮೊದಲ ವಿಕೆಟ್ ಪತನದ ಬಳಿಕ ಕ್ರುನಾಲ್ ಪಾಂಡ್ಯ ಮೋಡಿ ಮಾಡಿದರು.

ಇದನ್ನೂ ಓದಿ: ಸ್ಪಿನ್ನರ್‌ ಚಹಲ್‌ ಕಾಲೆಳೆದ ಮಹಿಳಾ ಕ್ರಿಕೆಟರ್‌ ಸ್ಮೃತಿ

ಕಾಲಿನ್ ಮುನ್ರೊ, ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರ್ಲಿ ಮಿಚೆಲ್, ಕ್ರುನಾಲ್‌ಗೆ ವಿಕೆಟ್ ಒಪ್ಪಿಸಿದರು. 50 ರನ್‌ಗೆ 4 ವಿಕೆಟ್ ಕಳೆದುಕೊಂಡ ಕಿವೀಸ್ ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕಿವೀಸ್ ತಂಡಕ್ಕೆ ರಾಸ್ ಟೇಲರ್ ಹಾಗೂ ಕೊಲಿನ್ ಡೇ ಗ್ರ್ಯಾಂಡ್ ಹೊಮ್ಮೆ ಆಸರೆಯಾಗಿದ್ದಾರೆ.