ತಿರುವನಂತಪುರಂ(ನ.01): ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 3-1 ಅಂತರದಲ್ಲಿ ಏಕದಿನ ಸರಣಿ ವಶಪಡಿಸಿಕೊಂಡಿದೆ.

 

 

ತಿರುವನಂತಪುರಂ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ದಾಳಿಗೆ ಕುಸಿಯಿತು. ಕೇವಲ 31.5 ಓವರ್‌ಗಳಲ್ಲಿ 104 ರನ್‌ಗೆ ಆಲೌಟ್ ಆಯಿತು. ಈ ಮೂಲಕ ಭಾರತದ ಗೆಲುವಿಗೆ 105 ರನ್ ಸುಲಭ ಟಾರ್ಗೆಟ್ ನೀಡಿತು.

ಸುಲಭ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲಿ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಆದರೆ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಭಾರತ ಗೆಲುವಿನತ್ತ ದಾಪುಗಾಲಿಟ್ಟಿತು.

ರೋಹಿತ್ ಶರ್ಮಾ 37ನೇ ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 14.5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ರೋಹಿತ್ ಅಜೇಯ ರನ್ ಸಿಡಿಸಿದರೆ ವಿರಾಟ್ ಕೊಹ್ಲಿ ಅಜೇಯ ರನ್ ಬಾರಿಸಿದರು.

ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯನ್ನ 3-1 ಅಂತರದಲ್ಲಿ ವಶಪಡಿಸಿಕೊಂಡಿತು. ಟೆಸ್ಟ್ ಬಳಿಕ ಏಕದಿನ ಸರಣಿ ಗೆದ್ದ ಭಾರತ ಇದೀಗ ನವೆಂಬರ್ 4 ರಿಂದ ಆರಂಭಗೊಳ್ಳಲಿರುವ ಟಿ20 ಸರಣಿಯತ್ತ ಚಿತ್ತ ನೆಟ್ಟಿದೆ.