ಭಾರತ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದಿರುವ ವಿಂಡೀಸ್ ತಂಡದ ಬ್ಯಾಟಿಂಗ್ ಹಾಗೂ ಟೀಂ ಇಂಡಿಯಾ ಬೌಲಿಂಗ್ ಕುರಿತ ಅಪ್‌ಡೇಟ್ಸ್ ಇಲ್ಲಿದೆ. 

ಚೆನ್ನೈ(ನ.11): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಟಿ20 ಪಂದ್ಯ ಆರಂಭದಲ್ಲೇ ಕುತೂಹಲ ಮೂಡಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವಿಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. 8ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ವೆಸ್ಟ್ ಇಂಡೀಸ್ ಇದೀಗ ಮೊದಲ ವಿಕೆಟ್ ಕಳೆದುಕೊಂಡಿದೆ.

Add Asianetnews Kannada as a Preferred SourcegooglePreferred

ಶೈ ಹೋಪ್ ಹಾಗೂ ಶಿಮ್ರೊನ್ ಹೆಟ್ಮೆಯರ್ ಮೊದಲ ಎಸೆತದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 6 ಓವರ್‌ಗಳಲ್ಲಿ ಈ ಜೋಡಿ 51 ರನ್ ಜೊತೆಯಾಟ ನೀಡೋ ಮೂಲಕ ಬೃಹತ್ ಮೊತ್ತದ ಸೂಚನೆ ನೀಡಿದರು. ಆದರೆ 24 ರನ್ ಸಿಡಿಸಿ ಮುನ್ನಗ್ಗುತ್ತಿದ್ದ ಶೈ ಹೋಪ್ ಯುಜವೇಂದ್ರ ಚೆಹಾಲ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ವಿಂಡೀಸ್ ಮೊದಲ ವಿಕೆಟ್ ಕಳೆದುಕೊಂಡಿತು.

ಅಂತಿಮ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ 2 ಬದಲಾವಣೆ ಮಾಡಿದೆ. ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಸ್ಪಿನ್ನರ್ ಕುಲ್ದೀಪ್ ಯಾದವ್ ಬದಲಿಗೆ ಯಜುವೇಂದ್ರ ಚಹಾಲ್ ಹಾಗೂ ವಾಶಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ.