ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಆರಂಭಗೊಂಡಿದೆ. ಈಗಾಗಲೆ ಟಾಸ್ ಗೆದ್ದಿರುವ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾದರೆ ತಂಡದಲ್ಲಿ ಸ್ಥಾನ ಪಡೆದವರು ಯಾರು? ಇಲ್ಲಿದೆ ವಿವರ.
ಕೋಲ್ಕತ್ತಾ(ನ.04): ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಇದೀಗ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಇಬ್ಬರು ಯುವ ಕ್ರಿಕೆಟಿಗರ ಪಾದಾರ್ಪಣೆ ಮಾಡಿದ್ದಾರೆ. ಯುವ ವೇಗಿ ಖಲೀಲ್ ಅಹಮ್ಮದ್ ಹಾಗೂ ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.
India's 12 for the 1st T2OI against Windies. #TeamIndia
— BCCI (@BCCI) November 3, 2018
Rohit Sharma (Captain), Shikhar Dhawan, KL Rahul, Rishabh Pant (wk), Manish Pandey, Dinesh Karthik, Krunal Pandya, Kuldeep Yadav, Bhuvneshwar Kumar, Jasprit Bumrah, Khaleel Ahmed, Yuzvendra Chahal
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಬೆಂಚ್ ಕಾದಿದ್ದ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಮತ್ತೊರ್ವ ಕನ್ನಡಿಗ ಮನೀಶ್ ಪಾಂಡೆ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಚುಟುಕು ಸರಣಿಯಿಂದ ವಿಶ್ರಾಂತಿ ಪಡೆದಿದ್ದರೆ, ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಯನ್ನ ಡ್ರಾಪ್ ಮಾಡಲಾಗಿದೆ.
ಟೀಂ ಇಂಡಿಯಾ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್ ಉಮೇಶ್ ಯಾದವ್.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 4, 2018, 6:38 PM IST