ಕೋಲ್ಕತ್ತಾ(ನ.04): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ರೋಚಕ ತಿರುವು ಪಡೆಯುತ್ತಿದೆ. ವೆಸ್ಟ್ ಇಂಡೀಸ್ ನೀಡಿದ 110ರನ್ ಸುಲಭ ಟಾರ್ಗೆಟ್ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾ ಇದೀಗ ವಿಕೆಟ್ ಉಳಿಸಿಕೊಳ್ಳಲು ಪರದಾಡುತ್ತಿದೆ.

ನಾಯಕ ರೋಹಿತ್ ಶರ್ಮಾ 6 ರನ್ ಸಿಡಿಸಿ ಔಟಾದರು. ಮತ್ತೊರ್ವ ಆರಂಭಿಕ ಶಿಖರ್ ಧವನ್ 3 ರನ್ ದಾಟಲಿಲ್ಲ. ಏಕದಿನ ಪಂದ್ಯದಲ್ಲಿ ಬೆಂಚ್ ಕಾದಿದ್ದ ಕನ್ನಡಿಗ ಕೆಎಲ್ ರಾಹುಲ್ ಸಿಕ್ಕ ಅವಕಾಶ ಉಪಯೋಗಿಸಲಿಲ್ಲ. ರಾಹುಲ್ 16 ರನ್ ಸಿಡಿಸಿ ಔಟಾದರು.

ಎಂ.ಎಸ್ ಧೋನಿ ಬದಲು ಚುಟುಕು ಮಾದರಿಯಲ್ಲಿ ಅವಕಾಶ ಪಡೆದ ಯುವ ಕ್ರಿಕೆಟಿಗ ರಿಷಬ್ ಪಂತ್ 1 ರನ್ ಸಿಡಿಸಿ ನಿರ್ಗಮಿಸಿದರು. ಹೀಗಾಗಿ 45 ರನ್ ಸಿಡಿಸುವಷ್ಟರಲ್ಲೇ ಭಾರತ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.