ಲಖನೌ(ನ.06): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಇದಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡೋ  ಸಾಧ್ಯತೆ ಇದೆ. 

ಕಳೆದ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಭುವನೇಶ್ವರ್ ಕುಮಾರ್ ದ್ವಿತೀಯ ಪಂದ್ಯಕ್ಕೆ ಲಭ್ಯರಿದ್ದಾರೆ. ಮೊದಲ ಪಂದ್ಯದಲ್ಲಿ ದುಬಾರಿಯಾದ ವೇಗಿ ಉಮೇಶ್ ಯಾದವ್ ಬದಲು 2ನೇ ಪಂದ್ಯಕ್ಕೆ ಭುವನೇಶ್ವರ್ ಕುಮಾರ್‌ಗೆ ಸ್ಥಾನ ನೀಡೋ ಸಾಧ್ಯತೆ ಹೆಚ್ಚಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗೋ ಸಾಧ್ಯತೆಗಳಿಲ್ಲ.

ಭಾರತ ಸಂಭವನೀಯ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಭುವನೇಶ್ವರ್ ಕುಮಾರ್