ಲಖನೌ(ನ.06): ಭಾರತ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಭಾರತ ಸರಣಿ ಗೆಲುವಿನ ವಿಶ್ವಾಸದಲ್ಲಿದ್ದರೆ, ವಿಂಡೀಸ್ ಸರಣಿ ಉಳಿಸಿಕೊಳ್ಳಲು ಹೋರಾಡುತ್ತಿದೆ.

ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ದುಬಾರಿಯಾದ ವೇಗಿ ಉಮೇಶ್ ಯಾದವ್ ಬದಲು ಭುವನೇಶ್ವರ್ ಕುಮಾರ್‌ಗೆ ಸ್ಥಾನ ನೀಡಲಾಗಿದೆ. ಇನ್ನುಳಿದಂತೆ ಯಾವುದೇ ಬದಲಾವಣೆ ಮಾಡಿಲ್ಲ. ವೆಸ್ಟ್ ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ನಿಕೋಲಾಸ್ ಪೂರನ್ ಅವಕಾಶ ಪಡೆದಿದ್ದಾರೆ. 

ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಭುವನೇಶ್ವರ್ ಕುಮಾರ್