ಗಯಾನ(ಆ.06): ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಕ್ಲೀನ್ ಸ್ವೀಪ್‌ನತ್ತ ಚಿತ್ತ ಹರಿಸಿದೆ. ಆರಂಭಿಕ 2  ಪಂದ್ಯ ಗೆದ್ದಿರುವ ಭಾರತ ಇದೀಗ 3ನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲೆರೆಡು ಪಂದ್ಯ ಅಮೆರಿಕಾದ ಫ್ಲೋರಿಡಾದಲ್ಲಿ ಆಯೋಜನೆಯಾಗಿತ್ತು. ಇದೀಗ ಟೂರ್ನಿ ಕೆರಿಬಿಯನ್ ನಾಡಿಗೆ ಶಿಫ್ಟ್ ಆಗಿದೆ. ಸರಣಿ ಗೆದ್ದಿರುವ ಟೀಂ ಇಂಡಿಯಾ ತಂಡದಲ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆ ಇದೆ. ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ನೆಪದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಚಹಾರ್ ಬ್ರದರ್ಸ್‌ಗೆ ಸ್ಥಾನ ಸಿಗುವ ಸಾಧ್ಯತೆ ಇದೆ.

ಸಂಭವನೀಯ ಆಟಗಾರರ ಪಟ್ಟಿ
ಭಾರತ: ಕೆ.ಎಲ್‌.ರಾಹುಲ್‌, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಮನೀಶ್‌ ಪಾಂಡೆ, ಕೃನಾಲ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ದೀಪಕ್‌ ಚಹಾರ್‌, ಭುವನೇಶ್ವರ್‌ ಕುಮಾರ್‌, ರಾಹುಲ್‌ ಚಹಾರ್‌, ಖಲೀಲ್‌ ಅಹ್ಮದ್‌.

ವಿಂಡೀಸ್‌: ಎವಿನ್‌ ಲೆವಿಸ್‌, ಸುನಿಲ್‌ ನರೈನ್‌, ನಿಕೋಲಸ್‌ ಪೂರನ್‌, ಕೀರನ್‌ ಪೊಲ್ಲಾರ್ಡ್‌, ರೋವ್ಮನ್‌ ಪೋವೆಲ್‌, ಕಾರ್ಲೋಸ್‌ ಬ್ರಾಥ್‌ವೇಟ್‌(ನಾಯಕ), ಕೀಮೋ ಪೌಲ್‌, ಶೆಲ್ಡನ್‌ ಕಾಟ್ರೆಲ್‌, ಒಶೇನ್‌ ಥಾಮಸ್‌, ಖಾರಿ ಪಿಯರ್‌.