Asianet Suvarna News Asianet Suvarna News

ಹೈದರಾಬಾದ್ ಟೆಸ್ಟ್: ಭಾರತ ದಾಳಿಗೆ ವಿಂಡೀಸ್ ಮೊದಲ ವಿಕೆಟ್ ಪತನ!

ಭಾರತ ಹಾಗೂ ವೆಸ್ಟ್ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭಗೊಂಡಿದೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಈ ರೋಚಕ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

India vs West Indies Test cricket Ashwin Removes Powell
Author
Bengaluru, First Published Oct 12, 2018, 10:30 AM IST
  • Facebook
  • Twitter
  • Whatsapp

ಹೈದರಾಬಾದ್(ಅ.12): ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದ  ಆರಂಭಿಕ ಸೆಶನ್‌ನಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವೆಸ್ಟ್ಇಂಡೀಸ್ ತಂಡದ ಮೊದಲ ವಿಕೆಟ್ ಕಬಳಿಸುವಲ್ಲಿ ಭಾರತ ಯಶಸ್ವಿಯಾಗಿದೆ.

 

 

ಕೀರನ್ ಪೊವೆಲ್ 22 ರನ್ ಸಿಡಿಸಿ ಆರ್ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸ್ಪಿನ್ನರ್‌ಗಳು ಮೊದಲ ವಿಕೆಟ್ ಕಬಳಿಸಿದ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಕ್ರೈಗ್ ಬ್ರಾಥ್ವೈಟ್ ಹಾಗೂ ಶೈ ಹೋಪ್ ತಂಡಕ್ಕೆ ಆಸರೆಯಾಗಿದ್ದಾರೆ.

ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬದಲು ಶಾರ್ದೂಲ್ ಠಾಕೂರ್‌ಗೆ ಅವಕಾಶ ನೀಡಿದೆ. ಈ ಮೂಲಕ ಠಾಕೂರ್ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಪೃಥ್ವಿ ಶಾ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು. 

 

 

Follow Us:
Download App:
  • android
  • ios