ಮುಂಬೈ(ಜು.29): ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ಅಮೆರಿಕಾಗೆ ಪ್ರಯಾಣ ಬೆಳೆಸಿದೆ. 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿ ಆಗಸ್ಟ್ 3 ರಿಂದ ಆರಂಭಗೊಳ್ಳಲಿದೆ. ಆರಂಭಿಕ 2 ಟಿ20 ಪಂದ್ಯ ಅಮೆರಿಕಾದ ಪ್ಲೋರಿಡಾದಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಸದ್ಯ ಅಮೆರಿಕಾಗೆ ಪ್ರಯಾಣ ಬೆಳೆಸಿದೆ. ಸದ್ಯ ವಿಂಡೀಸ್ ಪ್ರವಾಸಕ್ಕೆ ತೆರಳಿರುವ ತಂಡದಲ್ಲಿ ವಾಶಿಂಗ್ಟನ್ ಸುಂದರ್ ಕಿರಿಯ ಆಟಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಭಾರತ ತಂಡ ಇಂದು ವಿಂಡೀಸ್‌ಗೆ ಪ್ರಯಾಣ

ವಾಶಿಂಗ್ಟನ್ ಸುಂದರ್ ವಯಸ್ಸು 19. ಕಠಿಣ ಅಭ್ಯಾಸ ಹಾಗೂ ಪರಿಶ್ರಮಕ್ಕೆ ಫಲ ಸಿಕ್ಕಿದೆ. ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳು ವಿಶ್ವಾಸವಿದೆ ಎಂದು ವಾಶಿಂಗ್ಟನ್ ಸುಂದರ್ ಹೇಳಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಸುಂದರ್ ಹೇಳಿದ್ದಾರೆ. ನಿಧಾಸ್ ಟ್ರೋಫಿಯಲ್ಲಿ ವಾಶಿಂಗ್ಟನ್ ಸುಂದರ್ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ಬೌಂಡರಿ ಕೌಂಟ್ ಕುರಿತು ಚರ್ಚಿಸಲು ಮುಂದಾದ ಕುಂಬ್ಳೆ ನೇತೃತ್ವದ ಐಸಿಸಿ ಸಮಿತಿ

2018ರಲ್ಲೇ ಸಂದರ್ ಟೀಂ ಇಂಡಿಯಾಗೆ ಡೆಬ್ಯೂ ಮಾಡಿದ್ದರು. 18ನೇ ವಯಸ್ಸಿನಲ್ಲಿ ಭಾರತ ತಂಡದಲ್ಲಿ ಆಡಿದ ಸುಂದರ್ ಇದೀಗ ಮತ್ತೊಂದು ಅವಕಾಶ ಪಡೆದಿದ್ದಾರೆ.   ವೆಸ್ಟ್ ಇಂಡೀಸ್ ಎ ತಂಡದ ವಿರುದ್ದದ ಸರಣಿಯಲ್ಲಿ ವಾಶಿಂಗ್ಟನ್ ಸುಂದರ್ ಉತ್ತಮ ಪ್ರದರ್ಶನ ನೀಡಿದ್ದರು. ಈ ಪರ್ಫಾಮೆನ್ಸ್ ಸುಂದರ್ ಆಯ್ಕೆಗೆ ಪ್ರಮುಖ ಕಾರಣವಾಗಿದೆ.