ಬೆಂಗಳೂರಿನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಲಿದೆ ಎಂದು ದಾದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ಮಾ.02): ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಟೆಸ್ಟ್‌'ನಲ್ಲಿ ಭಾರತ ತಂಡ ಹೀನಾಯ ಸೋಲನುಭವಿಸಿದ್ದರೂ, ಬೆಂಗಳೂರಿನಲ್ಲಿ ಶನಿವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್‌ನಲ್ಲಿ ತಿರುಗೇಟು ನೀಡುವುದರೊಂದಿಗೆ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಪುಟಿದೇಳಲಿದೆ ಎಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

‘‘ಕಳೆದ ಹತ್ತು ತಿಂಗಳಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಅತ್ಯಮೋಘ ಪ್ರದರ್ಶನ ನೀಡಿದೆ. ಹಲವು ತಂಡಗಳು ಅನುಭವಿಸಿದಂತೆ ಭಾರತ ಕೂಡ ತವರಿನಲ್ಲಿ ಸೋಲನುಭವಿಸಿದೆ. ಆದರೆ, ಪುಣೆಯಲ್ಲಿನ ಸೋಲನ್ನು ಮೆಟ್ಟಿನಿಲ್ಲುವಷ್ಟು ಸಾಮರ್ಥ್ಯ ಆತಿಥೇಯ ತಂಡಕ್ಕಿದೆ’’ ಎಂದು ಗಂಗೂಲಿ ಪ್ರತಿಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಲಿದೆ ಎಂದು ದಾದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.