ಅರ್ಜುನ್ ವಿಜೇತ ಪ್ಯಾರಾ ಬ್ಯಾಡ್ಮಿಂಟನ್ ಪಟು ರಮೇಶ್ ಕೋವಿಡ್‌ಗೆ ಬಲಿ
ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ರಮೇಶ್ ಅವರನ್ನು ಜೂ.29ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಪರೀಕ್ಷಿಸಲಾಗಿತ್ತು. ಈ ವೇಳೆ ಅವರಿಗೆ ಸೋಂಕು ಇರುವುದು ಖಚಿತವಾಗಿತ್ತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು(ಜು.17): ಅರ್ಜುನ ಪ್ರಶಸ್ತಿ ವಿಜೇತ ಪ್ಯಾರಾ- ಬ್ಯಾಡ್ಮಿಂಟನ್ ಆಟಗಾರ ರಮೇಶ್ ಟಿಕಾರಾಮ್ ಗುರುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಭಾರತ ಪ್ಯಾರಾ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಎನ್ ಸಿ. ಸುಧೀರ್ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ಜೂ.29ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಪರೀಕ್ಷಿಸಲಾಗಿತ್ತು. ಈ ವೇಳೆ ಅವರಿಗೆ ಸೋಂಕು ಇರುವುದು ಖಚಿತವಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಕೋವಿಡ್ ಆಸ್ಪತ್ರೇಲಿ ಲೋಪ: ಅಧಿಕಾರಿಗಳ ವಿರುದ್ಧ ಸಚಿವ ಸುಧಾಕರ್ ಗರಂ
2001ರ ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವಲ್ಲಿ ರಮೇಶ್ ಟಿಕಾರಾಮ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ರಮೇಶ್ ಟಿಕಾರಾಮ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
2002ರಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಂದ ರಮೇಶ್ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ರಮೇಶ್ ಟಿಕಾರಾಮ್ ನಿಧನಕ್ಕೆ ಕ್ರೀಡಾಸಚಿವ ಕಿರಣ್ ರಿಜಿಜು ಸಂತಾಪ ಸೂಚಿಸಿದ್ದಾರೆ.