ಬೆಂಗಳೂರು[ಜ.17]: ಭಾರತ=ಆಸ್ಟ್ರೇಲಿಯಾ ನಡುವಿನ ಅಂತಿಮ ಹಾಗೂ ಏಕದಿನ ಪಂದ್ಯ ಶುಕ್ರವಾರ[ಜ.18] ಮೆಲ್ಬರ್ನ್ ಮೈದಾನದಲ್ಲಿ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದೆ. 

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದುಕೊಂಡಿದ್ದು, ಮೂರನೇ ಹಾಗೂ ಅಂತಿಮ ಪಂದ್ಯವನ್ನು ಗೆಲ್ಲುವ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ. ಹೀಗಾಗಿ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ವಿರಾಟ್ ಪಡೆಯ ಅಗ್ರ 6 ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ ಎನ್ನಲಾಗುತ್ತಿದೆ.

ಎರಡನೇ ಪಂದ್ಯದಲ್ಲಿ ಧೋನಿ ಮಾಡಿದ 3 ಎಡವಟ್ಟುಗಳಿವು..!

ಆದರೆ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಿ ಆಲ್ರೌಂಡರ್ ವಿಜಯ್ ಶಂಕರ್ ಅವರಿಗೆ ಅವಕಾಶ ಕಲ್ಪಿಸಬಹುದು ಎನ್ನಲಾಗುತ್ತಿದೆ. ಇನ್ನು ಪದಾರ್ಪಣೆ ಪಂದ್ಯದಲ್ಲೇ ದುಬಾರಿಯಾಗಿದ್ದ ಹೈದರಾಬಾದ್ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟು ಮಣಿಕಟ್ಟು ಸ್ಪಿನ್ನರ್ ಯಜುವೇಂದ್ರ ಚೆಹಾಲ್’ಗೆ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ಆಂಗ್ಲ ಖಾಸಗಿ ವೆಬ್’ಸೈಟ್’ವೊಂದು ವರದಿ ಮಾಡಿದೆ.

ಒಂದೇ ಪಂದ್ಯದಲ್ಲಿ ತೆಂಡುಲ್ಕರ್ 2 ದಾಖಲೆ ಅಳಿಸಿಹಾಕಿದ ಕಿಂಗ್ ಕೊಹ್ಲಿ..!

ಇದುವರೆಗೆ ಭಾರತ ಆಸ್ಟ್ರೇಲಿಯಾ ನಡುವೆ ಒಟ್ಟು 130 ಪಂದ್ಯಗಳು ನಡೆದಿದ್ದು, ಆಸ್ಟ್ರೇಲಿಯಾ 74 ಹಾಗೂ ಭಾರತ 10 ಪಂದ್ಯಗಳನ್ನು ಜಯಿಸಿದೆ. ಇನ್ನು 10 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಹೊರಬಂದಿಲ್ಲ.