ಜೂನ್ 23ರಿಂದ ಆರಂಭವಾಗಲಿರುವ ಸರಣಿಯಲ್ಲಿ, ಕೊಹ್ಲಿ ಪಡೆ 5 ಏಕದಿನ ಹಾಗೂ ಒಂದು ಟಿ20 ಪಂದ್ಯವನ್ನು ಆಡಲಿದೆ.
ಮುಂಬೈ(ಜೂ.15): ಚಾಂಪಿಯನ್ಸ್ ಟ್ರೋಫಿ ಬಳಿಕ ವೆಸ್ಟ್ ಇಂಡಿಸ್ ಪ್ರವಾಸ ಕೈಗೊಳ್ಳಲಿರುವ ಭಾರತಕ್ಕೆ 15 ಮಂದಿ ಆಟಗಾರರನ್ನೊಳಗೊಂಡ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ.
ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಎಂ.ಎಸ್. ಧೋನಿ,ಹಾಗೂ ಯುವರಾಜ್ ಸಿಂಗ್ ಕೂಡಾ ತಂಡದಲ್ಲಿ ಸ್ಥಾನಪಡೆಯಲು ಸಫಲರಾಗಿದ್ದಾರೆ. ಇದರ ಜೊತೆಗೆ ಯುವ ಪ್ರತಿಭೆಗಳಾದ ರಿಷಭ್ ಪಂತ್ ಹಾಗೂ 22 ವರ್ಷದ ಕುಲ್'ದೀಪ್ ಯಾಧವ್ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.
ಟೀಂ ಇಂಡಿಯಾಗೆ ಕಮ್'ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಹಿರಿಯ ಆಟಗಾರರಾದ ಸುರೇಶ್ ರೈನಾ, ಗೌತಮ್ ಗಂಭೀರ್ ಅವರಿಗೆ ಮತ್ತೆ ನಿರಾಸೆ ಎದುರಾಗಿದೆ. ಗಂಭೀರ್ ಹಾಗೂ ರೈನಾ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ರೈನಾ ಹಾಗೂ ಗಂಭೀರ್ ಕ್ರಿಕೆಟ್ ಭವಿಷ್ಯ ಮುಗಿಯಿತೆ ಎನ್ನುವ ಅನುಮಾನ ಮೂಡತೊಡಗಿದೆ.
ಜೂನ್ 23ರಿಂದ ಆರಂಭವಾಗಲಿರುವ ಸರಣಿಯಲ್ಲಿ, ಕೊಹ್ಲಿ ಪಡೆ 5 ಏಕದಿನ ಹಾಗೂ ಒಂದು ಟಿ20 ಪಂದ್ಯವನ್ನು ಆಡಲಿದೆ.
ತಂಡ ಹೀಗಿದೆ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರಿಷಭ್ ಪಂತ್, ಅಜಿಂಕ್ಯ ರಹಾನೆ, ಎಂ.ಎಸ್. ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ದಿನೇಶ್ ಕಾರ್ತಿಕ್.
