Asianet Suvarna News Asianet Suvarna News

ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ; ಈ ಇಬ್ಬರು ಸ್ಟಾರ್ ಕ್ರಿಕೆಟಿಗರ 2019 ವಿಶ್ವಕಪ್ ಕನಸು ಬಹುತೇಕ ಭಗ್ನ..!

ವೇಗಿಗಳ ವಿಭಾಗದಲ್ಲಿ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾಗೂ ಶಾರ್ದೂಲ್ ಠಾಕೂರ್ ಜೊತೆಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡಾ ಆಫ್ರಿಕಾ ಪ್ರವಾಸಕ್ಕೆ ಟಕೆಟ್ ಗಿಟ್ಟಿಸಿಕೊಂಡಿದ್ದಾರೆ.

Indian ODI squad for South Africa series announced

ಮುಂಬೈ(ಡಿ.23): ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಸರಣಿಗೆ 17 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಸುರೇಶ್ ರೈನಾ ಹಾಗೂ ಯುವರಾಜ್ ಸಿಂಗ್ ತಂಡದಲ್ಲಿ ಸ್ಥಾನ ಪಡೆಯಲು ಮತ್ತೊಮ್ಮೆ ವಿಫಲವಾಗಿದ್ದಾರೆ.

ವಿರಾಟ್ ಕೊಹ್ಲಿ ತಂಡ ಕೂಡಿಕೊಂಡಿದ್ದು, ರೋಹಿತ್ ಶರ್ಮಾ ಉಪನಾಯಕರಾಗಿದ್ದಾರೆ. ಉಳಿದಂತೆ ಶರ್ಮಾ ಸೇರಿದಂತೆ ಧವನ್ ಹಾಗೂ ರಹಾನೆ ಆರಂಭಿಕರಾಗಿ ಸ್ಥಾನ ಪಡೆದಿದ್ದಾರೆ. ಆದರೆ ಕೆ.ಎಲ್ ರಾಹುಲ್ ಅವರನ್ನು ಕೈಬಿಡಲಾಗಿದೆ. ಇನ್ನುಳಿದಂತೆ ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ ಹಾಗೂ ಮುರುಳಿ ಕಾರ್ತಿಕ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಲಂಕಾ ಸರಣಿಯಿಂದ ಹೊರಗುಳಿದಿದ್ದ ಕೇದಾರ್ ಜಾಧವ್ ಹಾಗೂ ಶಾರ್ದೂಲ್ ಠಾಕೂರ್ ತಂಡವನ್ನು ಕೂಡಿಕೊಂಡಿದ್ದಾರೆ.

ಆದರೆ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮತ್ತೊಮ್ಮೆ ಟೀಂ ಇಂಡಿಯಾ ಆಯ್ಕೆ ಸಮಿತಿಯ ಅವಕೃಪೆಗೊಳಗಾಗಿದ್ದಾರೆ. ಚಾಹಲ್, ಕುಲ್ದೀಪ್ ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವೇಗಿಗಳ ವಿಭಾಗದಲ್ಲಿ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾಗೂ ಶಾರ್ದೂಲ್ ಠಾಕೂರ್ ಜೊತೆಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡಾ ಆಫ್ರಿಕಾ ಪ್ರವಾಸಕ್ಕೆ ಟಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಯೋ ಯೋ ಟೆಸ್ಟ್ ಪಾಸ್ ಮಾಡಿ ಆಫ್ರಿಕಾ ಪ್ರವಾಸದ ಕನಸು ಕಾಣುತ್ತಿದ್ದ ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾಗೆ ನಿರಾಸೆ ಎದುರಾಗಿದೆ. ಪದೇ ಪದೇ ಟೀಂ ಇಂಡಿಯಾದಿಂದ ನಿರ್ಲಕ್ಷ್ಯಕ್ಕೊಳಗಾಗುತ್ತಿರುವ ಈ ಇಬ್ಬರ ಕ್ರಿಕೆಟ್ ಭವಿಷ್ಯ ಮುಕ್ತಾಯವಾಯಿತಾ ಎಂಬ ಮಾತುಗಳು ದಟ್ಟವಾಗತೊಡಗಿದೆ.

ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್. ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್,

Latest Videos
Follow Us:
Download App:
  • android
  • ios