ಆಂಧ್ರ ಪ್ರದೇಶ ವಿರುದ್ಧ ರಣಜಿ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಎರಡನೇ ಇನ್ನಿಂಗ್ಸ್‌'ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ವಿಜಯ್ ಗಾಯಗೊಂಡು ಮೈದಾನದಿಂದ ಹೊರನಡೆದರು.
ಚೆನ್ನೈ(ಅ.09): ಆರಂಭಿಕ ಬ್ಯಾಟ್ಸ್ಮನ್ ಮುರಳಿ ವಿಜಯ್ ಮತ್ತೊಮ್ಮೆ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ಆಂಧ್ರ ಪ್ರದೇಶ ವಿರುದ್ಧ ರಣಜಿ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಎರಡನೇ ಇನ್ನಿಂಗ್ಸ್'ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ವಿಜಯ್ ಗಾಯಗೊಂಡು ಮೈದಾನದಿಂದ ಹೊರನಡೆದರು.
ಭಾರತ ತಂಡಕ್ಕೆ ಮರಳುವ ವಿಶ್ವಾಸದಲ್ಲಿರುವ ವಿಜಯ್ಗೆ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿವೆ. ಈ ವರ್ಷದ ಆರಂಭದಲ್ಲಿ ವಿಜಯ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಮೊಣಕೈ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ ಐಪಿಎಲ್'ನಿಂದಲೂ ದೂರ ಉಳಿದಿದ್ದರು. ನಂತರ ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದರಾದರೂ, ಮೊಣಕೈ ನೋವಿನಿಂದ ಸರಣಿಯಿಂದ ಹಿಂದೆ ಸರಿಯಬೇಕಾಗಿತ್ತು.
