ವಿಶ್ವಕಪ್ ಬೇಟೆಯಾಡಲು ಇಂಗ್ಲೆಂಡ್ ಫ್ಲೈಟ್ ಏರಿದ ಭಾರತದ ಹುಲಿಗಳು
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್ ಧೋನಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಇಂಗ್ಲೆಂಡ್’ಗೆ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಕಂಡು ಬಂದಿದ್ದು ಹೀಗೆ...
ಮುಂಬೈ[ಮೇ.22]: ಬಹುನಿರೀಕ್ಷಿತ 12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನೊಂದೇ ವಾರ ಬಾಕಿಯಿದೆ. ಇದೇ ತಿಂಗಳ 30ರಿಂದ ಇಂಗ್ಲೆಂಡ್’ನಲ್ಲಿ ಆರಂಭವಾಗಲಿರುವ ಕ್ರಿಕೆಟ್ ಮಹಾಸಂಗ್ರಾಮಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸಜ್ಜಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್ ಧೋನಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಇಂಗ್ಲೆಂಡ್’ಗೆ ಪ್ರಯಾಣ ಬೆಳೆಸಿದ್ದಾರೆ.
ಈ ಬಾರಿ ಟೆಸ್ಟ್ ಆಡುವ ಅಗ್ರ 10 ತಂಡಗಳು ವಿಶ್ವಕಪ್’ಗಾಗಿ ಕಾದಾಡಲಿವೆ. ಈ ಬಾರಿಯ ವಿಶ್ವಕಪ್ ಟೂರ್ನಿ ರೌಂಡ್ ರಾಬಿನ್ ಮಾದರಿಯದ್ದಾಗಿದ್ದು, ಒಂದು ತಂಡವು ಉಳಿದ 9 ತಂಡಗಳ ವಿರುದ್ಧ ಸೆಣಸಲಿದೆ. ಭಾರತ ತಂಡವು ಮೇ.25ರಂದು ನ್ಯೂಜಿಲೆಂಡ್ ವಿರುದ್ಧ ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಆ ಬಳಿಕ ಮೇ.28ರಂದು ಬಾಂಗ್ಲಾದೇಶದ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನಾಡಲಿದೆ. ಇನ್ನು ವಿರಾಟ್ ಕೊಹ್ಲಿ ಪಡೆ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಐಸಿಸಿ ಏಕದಿನ ವಿಶ್ವಕಪ್ ಬಗೆಗಿನ ತಾಜಾ ಸುದ್ದಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...
1983ರಲ್ಲಿ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಚೊಚ್ಚಲ ವಿಶ್ವಕಪ್ ಜಯಿಸಿದ ಸಾಧನೆ ಮಾಡಿತ್ತು. ಆ ಬಳಿಕ 28 ವರ್ಷಗಳ ನಂತರ 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ ತವರಿನಲ್ಲೇ ವಿಶ್ವಕಪ್ ಗೆದ್ದು ಮೆರೆದಾಡಿತ್ತು. ಇನ್ನು 2015ರ ವಿಶ್ವಕಪ್’ನಲ್ಲಿ ಭಾರತ ಸಮಿಫೈನಲ್ ಪ್ರವೇಶಿಸಿತ್ತಾದರೂ, ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿ ಟೂರ್ನಿಯಿಂದ ಹೊರಬಿದ್ದಿತ್ತು.
ಫ್ಲೈಟ್ ಏರುವ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ಕಂಡು ಬಂದಿದ್ದು ಹೀಗೆ...
ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವೇಳಾಪಟ್ಟಿ ಹೀಗಿದೆ ನೋಡಿ...