ಜಕರ್ತಾ(ಜ.26): ಪ್ರಸಕ್ತ ವರ್ಷದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇದೀಗ ಪ್ರಶಸ್ತಿಗೆ ಮುಡಿಗೇರಿಸಿಕೊಳ್ಳಲು ತಯಾರಿ ಆರಂಭಿಸಿದ್ದಾರೆ.  ಇಂಡೋನೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೈನಾ ನೆಹ್ವಾಲ್ ಫೈನಲ್ ಪ್ರವೇಶಿಸಿದ್ದಾರೆ. 

ಇದನ್ನೂ ಓದಿ: ಗಣರಾಜ್ಯೋತ್ಸವ ಸಂಭ್ರಮ ಡಬಲ್-ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು!

ಸೆಮಿಫೈನಲ್ ಪಂದ್ಯದಲ್ಲಿ ಚೀನಾ ಹಿ ಬಿಂಗ್ಜಾವೊ ವಿರುದ್ದ 18-21, 21-12 ಹಾಗೂ 21-18 ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಕಳೆದ ವರ್ಷ ಸೈನಾ ಇಂಡೋನೇಷ್ಯಾ ಮಾಸ್ಟರ್ ಟೂರ್ನಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ಗೆದ್ದಿದ್ದರು. ಇದೀಗ ಸತತ 2ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದಾರೆ. 

ಇದನ್ನೂ ಓದಿ: ರೋಹಿತ್-ಧವನ್ ಅರ್ಧಶತಕ: ಸಚಿನ್-ಸೆಹ್ವಾಗ್ ದಾಖಲೆ ಉಡೀಸ್

2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಸೈನಾ ನೆಹ್ವಾಲ್ ಚಿನ್ನದ ಪದಕ ಗೆದ್ದಿದ್ದರು. ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದೀಗ 2019ರ ಆರಂಭದಲ್ಲೇ ಚಾಂಪಿಯನ್ ಪಟ್ಟ ಬಾಚಿಕೊಳ್ಳಲು ರೆಡಿಯಾಗಿದ್ದಾರೆ.