ಮೊಹಾಲಿ(ಸೆ.18): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20  ಪಂದ್ಯ ಮಳೆಯಿಂದ ರದ್ದಾದ ಕಾರಣ, ಇದೀಗ ಎಲ್ಲರ ಚಿತ್ತ 2ನೇ ಟಿ20 ಪಂದ್ಯದತ್ತ ನೆಟ್ಟಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಇದೀಗ ಪ್ರಮುಖ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಅನ್ನೋ ಕುತೂಹಲ ಮನೆಮಾಡಿದೆ.

ಇದನ್ನೂ ಓದಿ: ಟಿ20 ಫೈಟ್: ಜಯದ ತವ​ಕ​ದಲ್ಲಿ ಟೀಂ ಇಂಡಿಯಾ

3 ಪಂದ್ಯಗಳ ಸರಣಿಯಲ್ಲಿ ಆರಂಭಿಕ ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ಸರಣಿ ಗೆಲುವಿಗೆ ಇನ್ನುಳಿದ 2 ಪಂದ್ಯದಲ್ಲಿ ಗೆಲುವು ಅನಿವಾರ್ಯ. ಹೀಗಾಗಿ ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ಟೀಂ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ಭದ್ರತೆ ನೀಡಲು ಚಂಡೀಗಢ ಪೊಲೀಸ್ ನಿರಾಕರಣೆ!

ಟೀಂ ಇಂಡಿಯಾ ಸಂಭವನೀಯ ತಂಡ;
ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ