ಚೆನ್ನೈ(ಮಾ.21):  ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಟೂರ್ನಿ ಆರಂಭಕ್ಕೂ ಮೊದಲೇ ಆಘಾತ ಎದುರಾಗಿದೆ. ಮಾ.23 ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದೆ. ಆದರೆ CSK ತಂಡದ ಪ್ರಮುಖ ವೇಗಿ ದಕ್ಷಿಣ ಆಫ್ರಿಕಾದ ಲುಂಗಿ ಎನ್‌ಗಿಡಿ ಪಕ್ಕೆಲುಬು ನೋವಿನಿಂದ ಬಳಲುತ್ತಿದ್ದು 12ನೇ ಆವೃತ್ತಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. 

ಇದನ್ನೂ ಓದಿ: ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ CSK ನೆರವು

ಶ್ರೀಲಂಕಾ ವಿರುದ್ಧ ಏಕದಿನ ಸರಣಿ ವೇಳೆ ಅವರು ಗಾಯಗೊಂಡಿದ್ದರು. ವಿಶ್ವಕಪ್‌ ಮುಂದಿಟ್ಟುಕೊಂಡು ತನ್ನ ಪ್ರಮುಖ ವೇಗಿಯನ್ನು ಐಪಿಎಲ್‌ನಲ್ಲಿ ಆಡಿಸಲು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಹಿಂದೇಟು ಹಾಕಿದೆ. ತಂಡದ ವೈದ್ಯರು ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಸೂಚಿಸಿದ್ದು, ಮುಂದಿನ ತಿಂಗಳು ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: IPL 2019:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟೈಂ ಟೇಬಲ್!

2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿ ಗೆಲುವಿನಲ್ಲಿ ಲುಂಗಿ ಎನ್‌ಗಿಡಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ವಿದೇಶಿ ಬೌಲರ್‌ಗಳಲ್ಲಿ CSK ತಂಡದ ಮೊದಲ ಆಯ್ಕೆಯಾಗಿದ್ದ ಲುಂಗಿ ಎನ್‌ಗಿಡಿ ಅಲಭ್ಯರಾಗಿರೋದು ಚೆನ್ನೈ ತಂಡಕ್ಕೆ ತೀವ್ರ ಹಿನ್ನಡೆಯಾಗಿದೆ.