ಕ್ರಿಕೆಟ್‌ ಆಸ್ಪ್ರೇಲಿಯಾ ಟ್ವಿಟರ್‌'ನಲ್ಲಿ ಮಾರ್ಶ್ ದೀರ್ಘ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿಸಿದೆ.

ಮೆಲ್ಬೋರ್ನ್‌(ಮಾ.14): ಬೆಂಗಳೂರಲ್ಲಿ ಭಾರತ ವಿರುದ್ಧ ನಡೆದ 2ನೇ ಟೆಸ್ಟ್‌ ಪಂದ್ಯದ ವೇಳೆ ಭುಜದ ಗಾಯಕ್ಕೆ ತುತ್ತಾಗಿ ಟೆಸ್ಟ್‌ ಸರಣಿಯಿಂದ ಹೊರಬಿದ್ದಿರುವ ಆಸ್ಪ್ರೇಲಿಯಾದ ಆಲ್ರೌಂಡರ್‌ ಮಿಚೆಲ್‌ ಮಾಶ್‌ರ್‍, 10ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಿಂದಲೂ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

ಮಾರ್ಶ್ ಐಪಿಎಲ್‌'ನಲ್ಲಿ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ತಂಡದ ಆಟಗಾರರಾಗಿದ್ದಾರೆ. ಕ್ರಿಕೆಟ್‌ ಆಸ್ಪ್ರೇಲಿಯಾ ಟ್ವಿಟರ್‌'ನಲ್ಲಿ ಮಾರ್ಶ್ ದೀರ್ಘ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿಸಿದೆ.

ಮುಂದಿನ ವಾರ ವೈದ್ಯರನ್ನು ಭೇಟಿ ಮಾಡಿದ ಬಳಿಕ ಅವರು ಎಷ್ಟುದಿನಗಳ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ತಿಳಿದುಬರಲಿದೆ ಎಂದು ಸಿಎ ಹೇಳಿದೆ.