ಢಾಕ(ಮಾ.05): ಐಪಿಎಲ್ ಟೂರ್ನಿಗೆ ಫ್ರಾಂಚೈಸಿಗಳು ತಯಾರಿ ಆರಂಭಿಸಿದೆ. ಇತ್ತ ಸ್ಟಾರ್ ಕ್ರಿಕೆಟಿಗರು ಸದ್ಯ ರಾಷ್ಟ್ರೀಯ ತಂಡ ಪ್ರತಿನಿಧಿಸುತ್ತಿದ್ದಾರೆ. ಐಪಿಎಲ್ ಮುಗಿದ ಬೆನ್ನಲ್ಲೇ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಹೀಗಾಗಿ ಆಟಗಾರರ ಫಿಟ್ನೆಸ್ ಕುರಿತು ಕ್ರಿಕೆಟ್ ಮಂಡಳಿಗಳು ಹೆಚ್ಚು ತಲೆಕೆಡಿಸಿಕೊಂಡಿದೆ.

ಇದನ್ನೂ ಓದಿ: ಆರೇಂಜ್ ಕ್ಯಾಪ್ ಗೆದ್ದ ಐವರು ಐಪಿಎಲ್ ನಾಯಕರು!

ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ ಈ ಬಾರಿಯ ಐಪಿಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ. ಇಂಜುರಿಗೆ ತುತ್ತಾಗಿರುವ ಶಕೀಬ್ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.  

ಇದನ್ನೂ ಓದಿ: ರೋಹಿತ್ ಶರ್ಮಾ ಟ್ರೋಲ್ ಮಾಡಿದ ಮುಂಬೈ ಇಂಡಿಯನ್ಸ್!

ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದ ಶಕೀಬ್, ಬಾಂಗ್ಲಾದೇಶ ಪ್ರಿಮಿಯರ್ ಲೀಗ್ ಟೂರ್ನಿ ಮಿಸ್ ಮಾಡಿಕೊಂಡಿದ್ದರು. ಇದೀಗ ಚೇತರಿಸಿಕೊಂಡ ಬಾಂಗ್ಲಾ ತಂಡಕ್ಕೆ ಮರಳಿದ ಶಕೀಬ್ ಮತ್ತೆ ಇಂಜುರಿಯಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇದೀಗ ಶಕೀಬ್ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.

ಇದನ್ನೂ ಓದಿ: ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು - ಭಾರತೀಯರ ಹೃದಯ ಗೆದ್ದ ಬಿಸಿಸಿಐ!

ವಿಶ್ವಕಪ್ ದೃಷ್ಟಿಯಿಂದ ಶಕೀಬ್ ಸಂಪೂರ್ಣ ಚೇತರಿಸಿಕೊಳ್ಳುವುದು ಮುಖ್ಯ. ಹೀಗಾಗಿ ಲೀಗ್ ಟೂರ್ನಿ ಆಡುವುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಹೇಳಿದ್ದಾರೆ.