ಹೈದರಾಬಾದ್‌(ಮೇ.10): ಐಪಿಎಲ್‌ 12ನೇ ಆವೃತ್ತಿಯ ಫೈನಲ್‌ ಪಂದ್ಯದ ಟಿಕೆಟ್‌ ಕೇವಲ 2 ನಿಮಿಷದಲ್ಲಿ ಸೋಲ್ಡ್‌ಔಟ್‌ ಆಗಿದ್ದು ಅಚ್ಚರಿಗೆ ಕಾರಣವಾಗಿದೆ. ಅಭಿಮಾನಿಗಳಿಗೆ ಮುಂಚಿತವಾಗಿಯೇ ತಿಳಿಸದೆ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ನಡೆಸಿ ಬಿಸಿಸಿಐ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. 

IPL 12 ಫೈನಲ್‌ ಟಿಕೆಟ್‌ ಡೆಲ್ಲಿಗೋ, ಚೆನ್ನೈಗೋ?

ಟಿಕೆಟ್‌ ಮಾರಾಟ ಪಾರದರ್ಶಕವಾಗಿ ನಡೆದಿಲ್ಲ ಎಂದು ಆರೋಪಿಸಲಾಗಿದೆ. ಕ್ರೀಡಾಂಗಣ 39000 ಆಸನ ಸಾಮರ್ಥ್ಯ ಹೊಂದಿದ್ದು, ಸಾಮಾನ್ಯವಾಗಿ 25000ರಿಂದ 30000 ಟಿಕೆಟ್‌ಗಳನ್ನು ಮಾರಾಟ ಮಾಡಲಾಗುತ್ತದೆ. ಇಷ್ಟೊಂದು ಟಿಕೆಟ್‌ಗಳು ಕೇವಲ 2 ನಿಮಿಷದಲ್ಲಿ ಖಾಲಿಯಾಗಲು ಹೇಗೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಜತೆಗೆ 15​00 ರುಪಾಯಿ, 2000, 2500 ಹಾಗೂ 5000 ಮುಖಬೆಲೆಯ ಟಿಕೆಟ್‌ಗಳನ್ನಷ್ಟೇ ಮಾರಾಟ ಮಾಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ ಟಿಕೆಟ್‌ಗಳ ಮಾರಾಟ ಏಕ್ಕಿಲ್ಲ ಎನ್ನುವ ಪ್ರಶ್ನೆಗೆ ಬಿಸಿಸಿಐ ಉತ್ತರಿಸಿಲ್ಲ.

12ನೇ ಆವೃತ್ತಿಯ ಐಪಿಎಲ್ ಫೈನಲ್ ಮೇ.12ರಂದು ನಡೆಯಲಿದ್ದು, ಈಗಾಗಲೇ ಮುಂಬೈ ಇಂಡಿಯನ್ಸ್ ತಂಡವು ಫೈನಲ್ ಪ್ರವೇಶಿಸಿದೆ. ಇದೀಗ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ವಿಶಾಖಪಟ್ಟಣಂನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್ ಪ್ರವೇಶಿಸಲಿದೆ.