ಪಂತ್ ದಾಖಲೆ ಧೂಳೀಪಟ ಮಾಡಿದ ಪಾಂಡ್ಯ..!

ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಬ್ಯಾಟ್ಸ್’ಮನ್ ಹಾರ್ದಿಕ್ ಪಾಂಡ್ಯ ಇದೀಗ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಶಭ್ ಪಂತ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕುವಲ್ಲಿ ಪಾಂಡ್ಯ ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಏನದು ದಾಖಲೆ ನೀವೇ ನೋಡಿ...

IPL 12 Pandya Smashes Fastest 50 of the Season

ಕೋಲ್ಕತಾ[ಏ.29]: ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 12ನೇ ಆವೃತ್ತಿಯ ಐಪಿಎಲ್’ನಲ್ಲಿ ಅಕ್ಷರಶಃ ಅಬ್ಬರಿಸುತ್ತಿದ್ದಾರೆ. ಕೋಲ್ಕತಾ ನೈಟ್’ರೈಡರ್ಸ್ ವಿರುದ್ಧ ಈಡನ್ ಗಾರ್ಡನ್ ಮೈದಾನದಲ್ಲಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಈ ಆವೃತ್ತಿಯಲ್ಲಿ ಅತಿವೇಗವಾಗಿ ಅರ್ಧಶತಕ ಸಿಡಿಸಿದ ಕೀರ್ತಿಗೆ ಇದೀಗ ಹಾರ್ದಿಕ್ ಪಾಂಡ್ಯ ಪಾತ್ರರಾಗಿದ್ದಾರೆ.

ಕೋಲ್ಕತಾ ಪರ 14ನೇ ಓವರ್ ಬೌಲಿಂಗ್ ಮಾಡಿದ ಸುನಿಲ್ ನರೈನ್ ಎಸೆತವನ್ನು ಸಿಕ್ಸರ್’ಗಟ್ಟುವ ಮೂಲಕ ಅರ್ಧಶತಕ ಪೂರೈಸಿದರು. ಈ ಮೂಲಕ ರಿಶಭ್ ಪಂತ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಪಾಂಡ್ಯ ಅಳಿಸಿ ಹಾಕುವಲ್ಲಿ ಯಶಸ್ವಿಯಾದರು. ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಶಭ್ ಪಂತ್, ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ 12ನೇ ಆವೃತ್ತಿಯಲ್ಲಿ ಅತಿವೇಗವಾಗಿ ಅರ್ಧಶತಕ ಸಿಡಿಸಿದ ಆಟಗಾರ ಎನ್ನುವ ಗೌರವಕ್ಕೆ ಪಾತ್ರರಾಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಇದೀಗ ಆ ದಾಖಲೆಯನ್ನು ಅಳಿಸಿಹಾಕುವಲ್ಲಿ ಸಫಲರಾದರು. 

ವ್ಯರ್ಥವಾಯ್ತು ಪಾಂಡ್ಯ ಹೋರಾಟ- ಗೆಲುವಿನ ಸಿಹಿ ಕಂಡ KKR

ಇನ್ನೂ ಕಾಕತಾಳೀಯವೆಂದರೆ ಮುಂಬೈ ಇಂಡಿಯನ್ಸ್ ತಂಡದ ಕಿರಾನ್ ಪೊಲ್ಲಾರ್ಡ್ 2016ರಲ್ಲಿ ಹಾಗೂ 2017ರಲ್ಲಿ ಇಶಾನ್ ಕಿಶನ್ ಕೋಲ್ಕತಾ ನೈಟ್’ರೈಡರ್ಸ್ ವಿರುದ್ಧವೇ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನು ಒಟ್ಟಾರೆ ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಹಾರ್ದಿಕ್ ಪಾಂಡ್ಯ ಬಾರಿಸಿದ ಈ ಅರ್ಧಶತಕ 5ನೇ ಅತಿವೇಗದ ಅರ್ಧಶತಕವಾಗಿದೆ. 

IPL ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ CSK

ಇನ್ನು ಐಪಿಎಲ್ ಇತಿಹಾಸದಲ್ಲಿ ಕರ್ನಾಟಕದ ಕ್ರಿಕೆಟಿಗ ಕೆ.ಎಲ್ ರಾಹುಲ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಯೂಸುಫ್ ಪಠಾಣ್ ಹಾಗೂ ಸುನಿಲ್ ನರೈನ್ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಕ್ರಮವಾಗಿ 2 ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಸುರೇಶ್ ರೈನಾ 16 ಎಸೆತಗಳಲ್ಲಿ ಈ ಸಾಧನೆ ಮಾಡುವ ಮೂಲಕ 4ನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಕ್ರಿಸ್ ಗೇಲ್, ಹಾರ್ದಿಕ್ ಪಾಂಡ್ಯ, ಆ್ಯಡಂ ಗಿಲ್’ಕ್ರಿಸ್ಟ್, ಕ್ರಿಸ್ ಮೋರಿಸ್, ಇಶಾನ್ ಕಿಶನ್, ಕಿರಾನ್ ಪೊಲ್ಲಾರ್ಡ್ ಮತ್ತು ಸುನಿಲ್ ನರೈನ್ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. 
 

Latest Videos
Follow Us:
Download App:
  • android
  • ios