ಜೈಪುರ[ಏ.20]: ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ರಾಜಸ್ಥಾನ ತಂಡದ ನಾಯಕನಾಗಿ ಆಯ್ಕೆಯಾಗಿರುವ ಸ್ಟೀವ್ ಸ್ಮಿತ್ ಟಾಸ್ ಗೆಲ್ಲುತ್ತಿದ್ದಂತೆ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು. ರಾಜಸ್ಥಾನ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸ್ಮಿತ್, ಸ್ಟೋಕ್ಸ್ ಹಾಗೂ ರಿಯಾನ್ ಪರಾಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಜಯಂತ್ ಯಾದವ್ ಬದಲಿಗೆ ಮಯಾಂಕ್ ಮಾರ್ಕಂಡೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡಗಳು ಹೀಗಿವೆ: 

ಮುಂಬೈ ಇಂಡಿಯನ್ಸ್: