ಮುಂಬೈ(ಮೇ.05): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ನೇ ಆವೃತ್ತಿಯ ಅಂತಿಮ ಹಂತದತ್ತ ಸಾಗಿದ್ದು, ಭಾನುವಾರ ಲೀಗ್ ಹಂತದ ಕೊನೆಯ ಪಂದ್ಯಗಳು ನಡೆಯಲಿವೆ. 

ಮೊಹಾಲಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣೆಸಿದರೆ, ರಾತ್ರಿ 8ಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್‌ ವಿರುದ್ಧ ಪಂದ್ಯ ನಡೆಯುವ ಮೂಲಕ ಈ ಆವೃತ್ತಿಯ ಲೀಗ್‌ಗೆ ತೆರೆ ಬೀಳಲಿದೆ. ಮೇ 7ರಿಂದ ಪ್ಲೇ-ಆಫ್ ಪಂದ್ಯಗಳು ಶುರುವಾಗಲಿದೆ. 12ರಂದು ಹೈದರಾಬಾದ್‌ನಲ್ಲಿ ಫೈನಲ್ ನಡೆಯಲಿದೆ.

ಶನಿವಾರ ನಡೆದ ರಾಜಸ್ಥಾನ ರಾಯಲ್ಸ್-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಭರ್ಜರಿ ಜಯಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಇನ್ನು ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಆಘಾತ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದು 7ನೇ ಸ್ಥಾನಕ್ಕೆ ಲಗ್ಗೆಯಿಡುವುದರ ಮೂಲಕ 12ನೇ ಆವೃತ್ತಿಯ ಐಪಿಎಲ್’ನಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿದೆ.