ಮುಂಬೈನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಿದರೆ, ಕೋಲ್ಕತಾದ ಈಡನ್ ಗಾರ್ಡನ್ಸ್‌’ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ.

ಪುಣೆ[ಮೇ.21]: ಐಪಿಎಲ್ 11ನೇ ಆವೃತ್ತಿಯ ಪ್ಲೇ-ಆಫ್ ವೇಳಾಪಟ್ಟಿ ನಿರ್ಧಾರವಾಗಿದೆ. ಮೊದಲ ಕ್ವಾಲಿಫೈಯರ್‌’ನಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಸನ್‌ರೈಸರ್ಸ್‌ ಹೈದರಾಬಾದ್ ಹಾಗೂ 2ನೇ ಸ್ಥಾನ ಪಡೆದ ಚೆನ್ನೈ ಸೂಪರ್ ಕಿಂಗ್ಸ್ (ಮೇ 22) ಸೆಣಸಲಿದ್ದು, ಎಲಿಮಿನೇಟರ್‌ನಲ್ಲಿ 3ನೇ ಸ್ಥಾನ ಪಡೆದ ಕೋಲ್ಕತಾ ನೈಟ್ ರೈಡರ್ಸ್‌ ಹಾಗೂ 4ನೇ ಸ್ಥಾನ ಪಡೆದ ರಾಜಸ್ಥಾನ ರಾಯಲ್ಸ್ (ಮೇ 23) ಮುಖಾಮುಖಿಯಾಗಲಿವೆ. 

Add Asianetnews Kannada as a Preferred SourcegooglePreferred

ಮುಂಬೈನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಿದರೆ, ಕೋಲ್ಕತಾದ ಈಡನ್ ಗಾರ್ಡನ್ಸ್‌’ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ, ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ಕೋಲ್ಕತಾದಲ್ಲೇ ನಡೆಯಲಿರುವ 2ನೇ ಕ್ವಾಲಿಫೈಯರ್ (ಮೇ 25)ಪಂದ್ಯದಲ್ಲಿ ಎದುರಾಗಲಿವೆ. 

ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 27ರಂದು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಕದನದಲ್ಲಿ, ಕ್ವಾಲಿಫೈಯರ್ 1ನಲ್ಲಿ ಗೆದ್ದ ತಂಡವನ್ನು ಎದುರಿಸಲಿದೆ.