ಬೆಂಗಳೂರು(ಏ.21): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಪಂದ್ಯದಿಂದ ಹೊರಗುಲಿದಿದ್ದ CSK ನಾಯಕ ಎಂ.ಎಸ್.ಧೋನಿ ತಂಡ ಸೇರಿಕೊಂಡಿದ್ದಾರೆ. ಇತ್ತ ಎಬಿ ಡಿವಿಲಿಯರ್ಸ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

 

 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೋಶ್‌ನಲ್ಲಿದೆ. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಗೆಲುವಿನಿಂದ RCB ಆತ್ಮವಿಶ್ವಾಸ ಹೆಚ್ಚಾಗಿದೆ. ಕಳೆದ ಪಂದ್ಯದಲ್ಲಿ ಮುಗ್ಗರಿಸಿರುವ ಚೆನ್ನೈ ಇದೀಗ ಗೆಲುವಿನ ಹಳಿಗೆ ಮರಳೋ ವಿಶ್ವಾಸದಲ್ಲಿದೆ.