ಜೈಪುರ(ಏ.22): ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣ ಅಭಿಮಾನಿಗಳಿಂದ ಭರ್ತಿಯಾಗಿದೆ. ರೋಚಕ ಪಂದ್ಯ ವೀಕ್ಷಿಸಲು ಕಾತರರಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದಿರುವ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ತವರಿನ ರಾಜಸ್ಥಾನ ರಾಯಲ್ಸ್ ಆಡಿದ 9 ಪಂದ್ಯದಲ್ಲಿ 3 ಪಂದ್ಯ ಗೆದ್ದು 6ರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ತಂಡ 10ರಲ್ಲಿ 6 ಗೆಲುವು 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.