ಚೆನ್ನೈ(ಮೇ.01): ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹೋರಾಟಕ್ಕೆ ಅಭಿಮಾನಿಗಳು ಕಾತರರಾಗಿದ್ದಾರೆ. ಟಾಸ್ ಗೆದ್ದ  ಡೆಲ್ಲಿ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಧೋನಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.  ಚೆನ್ನೈ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಧೋನಿ, ರವೀಂದ್ರ ಜಡೇಜಾ ಹಾಗೂ ಫಾಫ್ ಡುಪ್ಲೆಸಿಸ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು  ಧ್ರುವ್ ಶೊರೆ, ಮಿಚೆಲ್ ಸ್ಯಾಂಟ್ನರ್ ಹಾಗೂ ಮುರಳಿ ವಿಜಯ್ ತಂಡದಿಂದ ಹೊರಗುಳಿದಿದ್ದಾರೆ.

ಡೆಲ್ಲಿ ತಂಡಜಲ್ಲಿ 2 ಬದಲಾವಣೆ ಮಾಡಲಾಗಿದೆ. ಕಾಗಿಸೋ ರಬಾಡ ಹಾಗೂ ಇಶಾಂತ್ ಶರ್ಮಾ ಬದಲು ಟ್ರೆಂಟ್ ಬೋಲ್ಟ್, ಜೆ ಸುಚಿತ್ ತಂಡ ಸೇರಿಕೊಂಡಿದ್ದಾರೆ.  ತವರಿನ ಚೆನ್ನೈ ತಂಡ 12 ಪಂದ್ಯದಲ್ಲಿ 8 ಗೆಲುವು ಹಾಗೂ 4 ಸೋಲಿನೊಂದಿಗೆ 16 ಅಂಕ ಸಂಪಾದಿಸಿದೆ.  ಈ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕೂಡ 12ರಲ್ಲಿ 8 ಗೆಲುವು 4 ಸೋಲಿನೊಂದಿಗೆ 16 ಸಂಪಾದಿಸಿದೆ. ಆದರೆ ರನ್‌ರೇಟ್ ಆಧಾರದಲ್ಲಿ ಮೊದಲ ಸ್ಥಾನದಲ್ಲಿದೆ.