ಕೋಲ್ಕತಾ(ಏ.12): ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಮೊದಲ ಮುಖಾಮುಖಿಯನ್ನು ಅಭಿಮಾನಿಗಳು ಇನ್ನೂ ಮರೆತಿಲ್ಲ. ಸೂಪರ್ ಓವರ್ ಮೂಲಕ ಗೆಲುವು ಸಾಧಿಸಿದ ಡೆಲ್ಲಿ ಇತಿಹಾಸ ರಚಿಸಿತ್ತು. ಇದೀಗ ಸೂಪರ್ ಓವರ್ ಸೇಡು ತೀರಿಸಿಕೊಳ್ಳಲು KKR ಸಜ್ಜಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿದೆ.

 

 

6ರಲ್ಲಿ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಕೆಕೆಆರ್‌, ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ತಂಡದ ಯಶಸ್ಸಿನಲ್ಲಿ ರಸೆಲ್‌ ಪಾತ್ರ ನಿರ್ಣಾಯಕವೆನಿಸಿದೆ.  ಮತ್ತೊಂದೆಡೆ ಡೆಲ್ಲಿ 6 ಪಂದ್ಯಗಳಿಂದ 6 ಅಂಕ ಗಳಿಸಿದ್ದು, ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದೆ.  ಇಂದಿನ ಪಂದ್ಯ ಆ್ಯಂಡ್ರೆ ರಸೆಲ್ ಹಾಗೂ ಡೆಲ್ಲಿ ವೇಗಿ ಕಾಗಿಸೋ ರಬಾಡ ನಡುವಿನ ಹೋರಾಟ ಎಂದೇ ಬಿಂಬಿತವಾಗಿದೆ.