ಹೈದರಾಬಾದ್(ಮೇ.12): ಕಳೆದ 2 ತಿಂಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡಿದ ಐಪಿಎಲ್ ಇದೀಗ ಅಂತಿಮ ಘಟ್ಟ  ತಲುಪಿದೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪ್ರಶಸ್ತಿಗಾಗಿ ಹೋರಾಟ ನಡಸೆಲಿದೆ. ಇದೀಗ ಇಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ ತೀವ್ರ ಕುತೂಹಲ ಕೆರಳಿಸಿದೆ.

12ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡ ಹಿರಿಯ ಆಲ್ರೌಂಡರ್ ಯುವರಾಜ್ ಸಿಂಗ್‌ಗೆ ಕೊನೆಯ ಅವಕಾಶ ಸಿಗುತ್ತಾ ಅನ್ನೋ ಕುತೂಹಲ ಇದೀಗ ಮನೆ ಮಾಡಿದೆ. ಆದರೆ ಫೈನಲ್ ಪಂದ್ಯದಲ್ಲಿ ಹೆಚ್ಚಿನ ಬದಲಾವಣೆ ಮಾಡದಿರಲು ನಿರ್ಧರಿಸಿರುವ ಮುಂಬೈ  ಯುವಿಗೆ ಅವಕಾಶ ನೀಡೋ ಸಾಧ್ಯತೆ ಕಡಿಮೆ. ಮಿಚೆಲ್ ಮೆಕ್ಲೆನಾಘನ್ ಅಥವಾ ಜಯಂತ್ ಯಾದವ್ ಇಬ್ಬರಲ್ಲಿ ಇದೀಗ ಪೈಪೋಟಿ ಏರ್ಪಟ್ಟಿದೆ. ಇನ್ನೂ ಚೆನ್ನೈ ತಂಡದಲ್ಲೂ ಬದಲಾವಣೆ ಸಾಧ್ಯತೆ ಕಡಿಮೆ. 

ಮುಂಬೈ ಸಂಭವನೀಯ ತಂಡ:
ಕ್ವಿಂಟನ್ ಡಿಕಾಕ್, ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ರಾಹುಲ್ ಚಹಾರ್, ಜಯಂತ್ ಯಾದವ್, ಲಸಿತ್ ಮಲಿಂಗ್. ಜಸ್ಪ್ರೀತ್ ಬುಮ್ರಾ 

ಚೆನ್ನೈ ಸಂಭವನೀಯ ತಂಡ:
ಶೇನ್ ವ್ಯಾಟ್ಸನ್, ಫಾಫ್ ಡುಪ್ಲೆಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ಡ್ಪೇನ್ ಬ್ರಾವೋ, ಹರ್ಭಜನ್ ಸಿಂಗ್, ಇಮ್ರಾನ್ ತಾಹಿರ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್