ಮುಂಬೈ(ಏ.22): ಐಪಿಎಲ್ 12ನೇ ಆವೃತ್ತಿ ಪಂದ್ಯ ದಿನದಿಂದ ದಿನಕ್ಕೆ ರೋಚಕತೆ ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ಇದೀಗ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ರೀಡಾಂಗಣ ಫಿಕ್ಸ್ ಆಗಿದೆ. ಈ ಮೊದಲು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಆಯೋಜಿಸಲು ನಿರ್ಧರಿಸಲಾಗಿತ್ತು. ಇದೀಗ ಫೈನಲ್ ಪಂದ್ಯವನ್ನು ಚೆನ್ನೈನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ. ಮೇ 12 ರಂದು ಫೈನಲ್ ಪಂದ್ಯ ನಡೆಯಲಿದೆ. 

ಇದನ್ನೂ ಓದಿ: CSK ವಿರುದ್ಧ ಸೇಡು ತೀರಿಸಿಕೊಂಡ RCB-ಕೊಹ್ಲಿ ಪಡೆಗೆ 1 ರನ್ ಗೆಲುವು!

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ 12ನೇ ಆವೃತ್ತಿ ಐಪಿಎಲ್ ಟೂರ್ನಿ ಫೈನಲ್ ಪಂದ್ಯ ಆಯೋಜನೆಯಾಗಲಿದೆ. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯ ಚನ್ನೈನಲ್ಲಿ ಆಯೋಜಿಸಲಾಗಿದೆ. ಇನ್ನು 2ನೇ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯ ವಿಶಾಖಪಟ್ಟಣಂದಲ್ಲಿ ನಡೆಯಲಿದೆ.

ಇದನ್ನೂ ಓದಿ: ನಿಧಾನಗತಿ ಬೌಲಿಂಗ್‌: ಅಶ್ವಿನ್‌ಗೆ 12 ಲಕ್ಷ ದಂಡ

ಈ ಬಾರಿಯ ಫೈನಲ್ ಪಂದ್ಯ ಚೆನ್ನೈನಲ್ಲಿ ಆಯೋಜಿಸಲು ಬಿಸಿಸಿಐ ಎಲ್ಲಾ ಸಿದ್ಧತೆ ನಡೆಸಿತ್ತು. ಆದರೆ ಚಿದಂಬರಂ ಕ್ರೀಡಾಂಗಣದಲ್ಲಿ ಮುಚ್ಚಲಾಗಿರುವ 2 ಗ್ಯಾಲರಿ ಆಸನ ವ್ಯವಸ್ಥೆ ಮತ್ತೆ ಆರಂಭಿಸಲು ಚೆನ್ನೈ ಕಾರ್ಪೋರೇಶನ್‌ನಿಂದ ಅನುಮತಿ ಸಿಕ್ಕಿಲ್ಲ. ಹೀಗಾಗಿ ಚೆನ್ನೈನಿಂದ ಐಪಿಎಲ್ ಪಂದ್ಯವನ್ನು ಸ್ಥಳಾಂತರ ಮಾಡಲಾಗಿದೆ.