ಚೆನ್ನೈ(ಏ.23): ಐಪಿಎಲ್ ಟೂರ್ನಿಯಲ್ಲಿ ಇದೀಗ ಸನ್ ರೈಸರ್ಸ್ ಹೈದರಾಬಾದ್ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಚಿದಂಬರಂ ಕ್ರೀಡಾಗಂಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಅಭ್ಯಾಸ ನಡೆಸಿದೆ. ಆದರೆ ಪಂದ್ಯ ಆರಂಭಕ್ಕೂ ಮುನ್ನವೇ SRH ತಂಡಕ್ಕೆ ಸಂಕಷ್ಠ ಎದುರಾಗಿದೆ.

ಇದನ್ನೂ ಓದಿ: ಮೊದಲ ಸ್ಥಾನದಲ್ಲಿ ಡೆಲ್ಲಿ- ಇತಿಹಾಸದಲ್ಲೇ ಇದೇ ಮೊದಲು ಎಂದ ಫ್ಯಾನ್ಸ್!

ಚೆನ್ನೈ ವಿರುದ್ಧದ ಪಂದ್ಯಕ್ಕೆ SRH ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಿದ್ದಾರೆ. ಮಹತ್ವದ ಪಂದ್ಯಕ್ಕೆ ನಾಯಕ ಅಲಭ್ಯತೆ ಇದೀಗ ತಂಡದ ಆತಂಕ ಹೆಚ್ಚಿಸಿದೆ. ವಿಲಿಯಮ್ಸನ್ ಅಜ್ಜಿ ನಿಧನರಾದ ಕಾರಣ, ತವರಿಗೆ ವಾಪಾಸ್ಸಾಗಿದ್ದಾರೆ. ಹೀಗಾಗಿ ಚೆನ್ನೈ ವಿರುದ್ಧದ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಕೊಹ್ಲಿ - ಡೇಲ್ ಸ್ಟೇನ್ ಅಪ್ಪುಗೆ- ಟ್ವಿಟರ್‌ನಲ್ಲಿ ಮೆಚ್ಚುಗೆ!

ಚೆನ್ನೈ ಮಾತ್ರವಲ್ಲ, ಎಪ್ರಿಲ್ 27 ರಂದು ನಡೆಯುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ವಿಲಿಯಮ್ಸನ್ ಅಲಭ್ಯರಾಗಿದ್ದಾರೆ. ವಿಲಿಯಮ್ಸನ್ ಅಲಭ್ಯತೆಯಿಂದ ವೇಗಿ ಭುವನೇಶ್ವರ್ ಕುಮಾರ್ ತಂಡದ ನಾಯಕತ್ವ ವಹಿಸಿಕೊಳ್ಳೋ ಸಾಧ್ಯತೆ ಇದೆ. ಈಗಾಗಲೇ ಗಾಯದ ಕಾರಣದಿಂದ ವಿಲಿಯಮ್ಸನ್ ಹಲವು ಪಂದ್ಯ ಮಿಸ್ ಮಾಡಿಕೊಂಡಿದ್ದಾರೆ.