ಹೈದರಾಬಾದ್(ಮಾ.12): ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ಇತ್ತ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಲು ಅಂತಿಮ ಕಸರತ್ತು ನಡೆಸುತ್ತಿದೆ. ಆದರೆ ತಯಾರಿ ಆರಂಭಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ಅಡೆ ತಡೆ ಎದುರಾಗಿದೆ.

ಇದನ್ನೂ ಓದಿ: ಐಪಿಎಲ್ 2019: ನಗಿಸಲು ಬರ್ತಿದ್ದಾರೆ RCB ತಂಡದ Mr.ನ್ಯಾಗ್ಸ್!

ಕಳೆದ ಆವೃತ್ತಿಯಲ್ಲಿ ಹೈದರಾಬಾದ್ ತಂಡವನ್ನು ಮುನ್ನಡೆಸಿದ ಕೇನ್ ವಿಲಿಯಮ್ಸನ್ ಇದೀಗ ಇಂಜುರಿಗೆ ತುತ್ತಾಗಿದ್ದು, ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಲಿದ್ದಾರೆ. ವೈದ್ಯರ ಸೂಚನೆ ಬಳಿಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. 

ಇದನ್ನೂ ಓದಿ: ಐಪಿಎಲ್ 2019ರ ವೇಳಾಪಟ್ಟಿ ಪ್ರಕಟ-ಉದ್ಘಾಟನಾ ಪಂದ್ಯದಲ್ಲಿ RCB -CSK ಫೈಟ್!

ಬಾಂಗ್ಲಾದೇಶ ವಿರುದ್ದದ 2ನೇ ಟೆಸ್ಟ್ ಪಂದ್ಯದ ಫೀಲ್ಡಿಂಗ್ ವೇಳೆ, ಭುಜದ ನೋವಿಗೆ ತುತ್ತಾದರು. ಹೀಗಾಗಿ 3ನೇ ಟೆಸ್ಟ್ ಪಂದ್ಯದಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ. ಸಂಪೂರ್ಣ ಚೇತರಿಸಿಕೊಳ್ಳಲು ಕನಿಷ್ಠ 2 ರಿಂದ 3 ವಾರಗಳ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಮಾರ್ಚ್ 23 ರಿಂದ 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಹೀಗಾಗಿ ವಿಲಿಯಮ್ಸನ್ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತ.