ಐಪಿಎಲ್ 2019: ಪುಲ್ವಾಮಾ ಹುತಾತ್ಮ ಕುಟುಂಬಕ್ಕೆ ಕಿಂಗ್ಸ್ XI ಪಂಜಾಬ್ ನೆರವು!
ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು CRPF ಯೋಧರು ಹುತಾತ್ಮರಾಗಿದ್ದಾರೆ. ಇದೀಗ ಹುತಾತ್ಮ ಯೋಧರ ಕುಟುಂಬಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನೆರವಾಗಿದೆ.
ಪಂಜಾಬ್(ಮಾ.19): 12ನೇ ಆವೃತ್ತಿ ಐಪಿಎಲ್ ಟೂರ್ನಿ ಮಾ.23 ರಿಂದ ಆರಂಭಗೊಳ್ಳುತ್ತಿದೆ. ಇದೀಗ ಎಲ್ಲಾ ತಂಡಗಳು ಅಂತಿಮ ತಯಾರಿ ನಡೆಸುತ್ತಿದೆ. ಬಲಿಷ್ಠ ಆಟಗಾರರನ್ನು ಖರೀದಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಈ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಅಭ್ಯಾಸ ನಡೆಸುತ್ತಿರುವ ಪಂಜಾಬ್ ತಂಡ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರ ಯೋಧರ ಕುಟಂಬಕ್ಕೆ ನೆರವಾಗಿದೆ.
ಇದನ್ನೂ ಓದಿ: ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು - ಭಾರತೀಯರ ಹೃದಯ ಗೆದ್ದ ಬಿಸಿಸಿಐ!
ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾರತದ 40ಕ್ಕೂ ಹೆಚ್ತು CRPF ಯೋಧರು ಹುತಾತ್ಮರಾಗಿದ್ದಾರೆ. ಇದರಲ್ಲಿ ಪಂಜಾಬ್ ಹಾಗೂ ಹಿಮಾಚಲ ಪ್ರದೇಶದ ಐವರು ಯೋಧರು ಹುತಾತ್ಮರಾಗಿದ್ದು, ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಂತೆ ಓಟ್ಟು 25 ಲಕ್ಷ ರೂಪಾಯಿ ಹಣವನ್ನು ಪಂಜಾಬ್ ತಂಡ ನೀಡಿದೆ.
ಇದನ್ನೂ ಓದಿ: ಐಪಿಎಲ್ 2019: ಸಂಪೂರ್ಣ ವೇಳಾ ಪಟ್ಟಿ ಬಿಡುಗಡೆ!
ಪಂಜಾಬ್ ಹಾಗೂ ಹಿಮಾಚಲ ಪ್ರದೇಶದ CRPF ಯೋಧರಾದ ಜೈಮಾಲ್ ಸಿಂಗ್, ಸುಖ್‌ಜಿಂದರರ್ ಸಿಂಗ್, ಮನಿಂದರ್ ಸಿಂಗ್, ಕುಲ್ವಿಂದರ್ ಸಿಂಗ್ ಹಾಗೂ ತಿಲಕ್ ರಾಜ್ ಹುತಾತ್ಮರಾಗಿದ್ದಾರೆ. ಇವರ ಕುಟುಂಬಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರ್ಥಿಕ ನೆರವು ನೀಡಿದೆ. ಈಗಾಗಲೇ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿರುವ ಬಿಸಿಸಿಐ, ಸಮಾರಂಭದ ಹಣವನ್ನು ಹುತಾತ್ಮ CRPF ಯೋಧರ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿದೆ.