ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಲೀಗ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದಿರುವ  KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಬೆಂಗಳೂರು(ಏ.05): 12ನೇ ಆವೃತ್ತಿ ಐಪಿಎಲ್ ಟೂರ್ನಿ ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಸಿಹಿಯನ್ನೇ ತಂದುಕೊಟ್ಟಿಲ್ಲ. ಆಡಿದ 4 ಪಂದ್ಯಗಳಲ್ಲಿ ಸೋತು ತೀವ್ರ ಮುಖಭಂಗಕ್ಕೊಳಗಾಗಿದೆ. ಇದೀಗ ತವರಿನಲ್ಲಿ 5ನೇ ಪಂದ್ಯ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದಿರುವ RCB ಟಾಸ್ ಸೋತಿದೆ. ಪ್ರಮುಖ ಪಂದ್ಯದಲ್ಲಿ ಟಾಸ್ ಗೆದ್ದಿರುವ KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. RCB ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಿಮ್ರೊನ್ ಹೆಟ್ಮೆಯರ್ ಬದಲು ಟಿಮ್ ಸೌಥಿ ಕಣಕ್ಕಿಳಿಯುತ್ತಿದ್ದರೆ, ಉಮೇಶ್ ಯಾದವ್ ಬದಲು ಪವನ್ ನೇಗಿಗೆ ಅವಕಾಶ ನೀಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ; ಎಬಿಡಿಗೆ ಕೆಕೆಆರ್ ಕಂಡ್ರೆ ಭಯ..!

ಕೆಕೆಆರ್ ಆಡಿದ 3 ಪಂದ್ಯದಲ್ಲಿ 2 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಮೊದಲ ಪಂದದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೋಲಿಸಿತ್ತು. 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್ ಓವರ್‌ನಲ್ಲಿ ಸೋಲು ಅನುಭವಿಸಿತು.